Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಅಗ್ರಸ್ಥಾನದಲ್ಲಿ ಕಿಂಗ್ ಕೊಹ್ಲಿ: ದ್ವಿತೀಯ ಸ್ಥಾನಕ್ಕೇರಿದ ಬಾಬರ್

0

ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಟೀಮ್ ಇಂಡಿಯಾದ ರನ್​ ಮೆಷಿನ್ ವಿರಾಟ್ ಕೊಹ್ಲಿ ಎಂಬುದು ವಿಶೇಷ. ಏಷ್ಯಾಕಪ್​ನಲ್ಲಿ ಅತ್ಯಧಿಕ ವೈಯುಕ್ತಿಕ ಸ್ಕೋರ್​ಗಳಿಸಿದ ಟಾಪ್-5 ಬ್ಯಾಟರ್​ಗಳ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ…

ಏಷ್ಯಾಕಪ್​ 2023 ರ ಮೊದಲ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬಾಬರ್ 4 ಭರ್ಜರಿ ಸಿಕ್ಸ್​ ಹಾಗೂ 14 ಫೋರ್​ಗಳೊಂದಿಗೆ 151 ರನ್ ಬಾರಿಸಿದರು.

ಈ ಮೂಲಕ ಏಷ್ಯಾಕಪ್​ನಲ್ಲಿ 150+ ಸ್ಕೋರ್​ಗಳಿಸಿದ ಮೊದಲ ನಾಯಕ ಎನಿಸಿಕೊಂಡರು. ಅಲ್ಲದೆ ಏಷ್ಯಾಕಪ್ ಇತಿಹಾಸದಲ್ಲೇ ಅತ್ಯಧಿಕ ರನ್ ಬಾರಿಸಿದ 2ನೇ ಬ್ಯಾಟರ್ ಎಂಬ ದಾಖಲೆಯನ್ನು ಕೂಡ ಬರೆದರು.

ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ವಿರಾಟ್ ಕೊಹ್ಲಿ ಎಂಬುದು ವಿಶೇಷ. ಹಾಗಿದ್ರೆ ಏಷ್ಯಾಕಪ್​ನಲ್ಲಿ ಅತ್ಯಧಿಕ ವೈಯುಕ್ತಿಕ ಸ್ಕೋರ್​ಗಳಿಸಿದ ಬ್ಯಾಟರ್​ಗಳು ಯಾರೆಲ್ಲಾ ಎಂದು ನೋಡೋಣ…

1- ವಿರಾಟ್ ಕೊಹ್ಲಿ: ಏಷ್ಯಾಕಪ್​ನಲ್ಲಿ ಅತ್ಯಧಿಕ ರನ್​ ಬಾರಿಸಿದ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. 2012 ರಲ್ಲಿ ಪಾಕಿಸ್ತಾನ್ ವಿರುದ್ಧ ಕಿಂಗ್ ಕೊಹ್ಲಿ 183 ರನ್ ಬಾರಿಸಿ ದಾಖಲೆ ನಿರ್ಮಿಸಿದ್ದರು. ಈ ದಾಖಲೆಯನ್ನು ಇದುವರೆಗೆ ಯಾರಿಗೂ ಮುರಿಯಲು ಸಾಧ್ಯವಾಗಿಲ್ಲ ಎಂಬುದು ವಿಶೇಷ.

2- ಬಾಬರ್ ಆಝಂ: ಏಷ್ಯಾಕಪ್​ 2023 ರಲ್ಲಿ ನೇಪಾಳ ವಿರುದ್ಧ 151 ರನ್​ ಸಿಡಿಸುವ ಮೂಲಕ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಈ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ್ದಾರೆ.

3- ಯೂನಿಸ್ ಖಾನ್: 2004 ರಲ್ಲಿ ಹಾಂಗ್​ಕಾಂಗ್ ವಿರುದ್ಧ ಪಾಕಿಸ್ತಾನ್ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್ ಯೂನಿಸ್ ಖಾನ್ 144 ರನ್ ಬಾರಿಸಿದ್ದರು.

4- ಮುಶ್ಫಿಕುರ್ ರಹೀಮ್: 2018ರ ಏಷ್ಯಾಕಪ್​ನಲ್ಲಿ ಶ್ರೀಲಂಕಾ ವಿರುದ್ಧ ಬಾಂಗ್ಲಾದೇಶ್ ವಿಕೆಟ್ ಕೀಪರ್ ಬ್ಯಾಟರ್ ಮುಶ್ಫಿಕುರ್ ರಹೀಮ್ 144 ರನ್ ಬಾರಿಸಿ ಮಿಂಚಿದ್ದರು.

5- ಶೊಯೇಬ್ ಮಲಿಕ್: 2004 ರ ಏಷ್ಯಾಕಪ್​ನಲ್ಲಿ ಟೀಮ್ ಇಂಡಿಯಾ ವಿರುದ್ಧ ಶೊಯೇಬ್ ಮಲಿಕ್ 143 ರನ್ ಬಾರಿಸಿ ಅಬ್ಬರಿಸಿದ್ದರು. ಈ ಮೂಲಕ ಈ ಪಟ್ಟಿಯಲ್ಲಿ 5ನೇ ಸ್ಥಾನ ಅಲಂಕರಿಸಿದ್ದಾರೆ.

Leave A Reply

Your email address will not be published.