Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಅಪಘಾತ ನೋಡಲು ಹೋದವರ ಮೇಲೆ ಹರಿದ ಕಾರು – ಪೊಲೀಸರು ಸೇರಿ 9 ಮಂದಿ ಮೃತ್ಯು

0

ಗುಜರಾತ್:‌ ಅಹಮದಾಬಾದ್‌ನ ಇಸ್ಕಾನ್ ಸೇತುವೆ ಬಳಿ ಕಾರು ಹರಿದು ಪೊಲೀಸ್‌ ಸಿಬ್ಬಂದಿಗಳು ಸೇರಿದಂತೆ 9 ಮಂದಿ ಮೃತಪಟ್ಟಿರುವ ಘಟನೆ ಜು.20 ರಂದು ನಡೆದಿದೆ.

ಸರ್ಖೇಜ್-ಗಾಂಧಿನಗರ (ಎಸ್‌ಜಿ) ಹೆದ್ದಾರಿಯಲ್ಲಿನ ಇಸ್ಕಾನ್ ಸೇತುವೆ ಬಳಿ ಥಾರ್ ಮತ್ತು ಡಂಪರ್ ಟ್ರಕ್‌ ನಡುವೆ ತಡರಾತ್ರಿ 1:30 ರ ಹೊತ್ತಿಗೆ ಅಪಘಾತವೊಂದು ಸಂಭವಿಸಿತ್ತು. ಈ ಅಪಘಾತವನ್ನು ನೋಡಲು ಪೊಲೀಸರು ಹತ್ತಾರು ಮಂದಿ ಸೇರಿದ್ದು, ಇದೇ ವೇಳೆ ಮತ್ತೊಂದು ಭೀಕರ ಘಟನೆ ನಡೆದಿದೆ.

ಇನ್ನು ವೇಗವಾಗಿ ಬಂದ ಜಾಗ್ವಾರ್‌ ಕಾರು ಅಪಘಾತದ ಸ್ಥಳದಲ್ಲಿ ನೆರದಿದ್ದ ಜನರ ಮೇಲೆ ಏಕಾಏಕಿ ಹರಿದಿದ್ದು, ಘಟನೆಯಲ್ಲಿ ಇಬ್ಬರು ಪೊಲೀಸ್‌ ಸಿಬ್ಬಂದಿಗಳು ಸೇರಿದಂತೆ 9 ಮಂದಿ ಮೃತಪಟ್ಟಿದ್ದಾರೆ.

ಒಟ್ಟು 12 ಜನರನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು ಅದರಲ್ಲಿ 9 ಮಂದಿ ಮೃತಪಟ್ಟಿದ್ದಾರೆ.

Leave A Reply

Your email address will not be published.