ಬೀದರ್: ರಾಜ್ಯದಲ್ಲಿ ಬಾಲ್ಯ ವಿವಾಹ ನಿಷೇಧವಿದೆ. ಈ ಕುರಿತು ಎಲ್ಲ ಕಡೆ ಜಾಗೃತಿ ಮೂಡಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಆದರೆ ಸಮಾಜ ಅತ್ಯಂತ ಗೌರವದಿಂದ ಗುರುತಿಸುವ ಸರ್ಕಾರಿ ಶಿಕ್ಷಕರೊಬ್ಬರು ಇಂಥ ಕೃತ್ಯದಲ್ಲಿ ಭಾಗಿಯಾಗಿರುವುದು ನೋವಿನ ಸಂಗತಿ. ಈ ಪ್ರಕರಣದಿಂದ ಇಡೀ ಶಿಕ್ಷಣ ಇಲಾಖೆ ತಲೆತಗ್ಗಿಸುವಂತಾಗಿದೆ. ಇದರಿಂದ ಪೋಷಕರು, ವಿದ್ಯಾರ್ಥಿಗಳೂ ಶಿಕ್ಷಕರನ್ನು ಅನುಮಾನದಿಂದ ನೋಡುವಂತಾಗಿದೆ. ಮಕ್ಕಳಿಗೆ ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಬೋಧಿಸಬೇಕಾಗಿರು ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಅಪ್ರಾಪ್ತ ಬಾಲಕಿಯನ್ನು ವಿವಾಹವಾಗಿರುವ ಘಟನೆ ಬೀದರ್ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಗಡಿ ಗ್ರಾಮ ಹಲಸಿ ತುಗಾಂವ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಸಂದೀಪಕುಮಾರ ಅಜೂರೆ ಎಂಬುವರು ಅಪ್ರಾಪ್ತೆಯನ್ನು ವಿವಾಹವಾದ ಬಗ್ಗೆ ಭಾಲ್ಕಿ ತಾಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀನಿವಾಸ ಬಾಳುವಾಲೆ ಅವರು ಮೇಹಕರ್ ಪೋಲೀಸ್ ಠಾಣೆಯಲ್ಲಿ ಶಿಕ್ಷಕನ ವಿರುದ್ಧ ಆಗಸ್ಟ್ 5 ರಂದು ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ‘ಪ್ರಕರಣದ ತನಿಖೆ ಮಾಡುತ್ತಿದ್ದೇವೆ. ಶಿಕ್ಷಕ ತಪ್ಪಿತಸ್ಥ ಎಂದು ತಿಳಿದುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಮೇಹಕರ ಪೊಲೀಸ್ ಠಾಣೆ ಪಿಎಸ್‌ಐ ಶಿವಕುಮಾರ ಬಳತೆ ತಿಳಿಸಿದ್ದಾರೆ.
[vc_row][vc_column]
BREAKING NEWS
- ಉದ್ಯೋಗಿಯಿಂದ ಮಹಾನ್ ಎಡವಟ್ಟು – ಮೈಕ್ರೋಸಾಫ್ಟ್ ನ 32ಟಿಬಿ ಮಾಹಿತಿ ಸೋರಿಕೆ
- ವಂಚನೆ ಪ್ರಕರಣ – ಚೈತ್ರಾ ಸೇರಿ 7 ಮಂದಿಗೆ ಅ. 6ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ
- ನಿಂಜಾ ಪ್ರಶಸ್ತಿ ಪಡೆದ 71 ವರ್ಷದ ಮಹಿಳೆಯ ಗಿನ್ನಿಸ್ ದಾಖಲೆ!
- ಹೊಸ ಐಫೋನ್ ಖರೀದಿಗೆ ಮುಗಿಬಿದ್ದ ಜನ – ಈ ಫೋನ್ ನಲ್ಲಿ ಅಂಥಾದ್ದೇನಿದೆ?
- ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಕುರಿತ ಸ್ಪೋಟಕ ಮಾಹಿತಿ ಬಹಿರಂಗ?
- ಸನಾತನ ಧರ್ಮದ ಬಗ್ಗೆ ಮಾತನಾಡಿದ್ದಕ್ಕೆ ಚಿಕ್ಕಮಗುವನ್ನು ಬೇಟೆಯಾಡುತ್ತಿದ್ದಾರೆ -ಕಮಲ್ ಹಾಸನ್
- ಮುಂಬೈ ಜಿಎಸ್ ಬಿ ಗಣೇಶೋತ್ಸವದಲ್ಲಿ ಪಾಲ್ಗೊಂಡ ಕರಾವಳಿ ಬೆಡಗಿ ನಟಿ ಪೂಜಾ ಹೆಗ್ಡೆ
- ಎತ್ತಿನಹೊಳೆ ಯೋಜನೆ Out dated subject – ಮಾಜಿ ಸಿಎಂ ವೀರಪ್ಪ ಮೊಯಿಲಿ..!
- ಬೆಂಗಳೂರಿನಲ್ಲಿ ಮೊದಲ ಬಾರಿಗೆ ಕಂಬಳ – ಅಶೋಕ್ ರೈ ನೇತೃತ್ವದಲ್ಲಿ ಸ್ಥಳ ಪರಿಶೀಲನೆ
- ಮುದ್ರಾಂಕ ಇಲಾಖೆಯ ವೆಬ್ಸೈಟ್ಗೆ ಕನ್ನ – ಎಇಪಿಎಸ್ ಮೂಲಕ ಒಂದು ಲಕ್ಷ ರೂ. ವಂಚನೆ?