ನವದೆಹಲಿ: ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಬಿಐ ಇಂದು ಬಂಧಿಸಿದೆ.
ಪ್ರಕರಣ ಸಂಬಂಧ ತಿಹಾರ್ ಜೈಲಿನಲ್ಲೇ ಕೇಜ್ರಿವಾಲ್ ಅವರನ್ನು ವಿಚಾರಣೆ ನಡೆಸಿದ್ದ ಸಿಬಿಐ ಇಂದು ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಗೆ ಹಾಜರುಪಡಿಸಿತ್ತು. ಕೇಜ್ರಿವಾಲ್‌ರನ್ನು ವಿಚಾರಣೆ ನಡೆಸಲು ಕೋರ್ಟ್ ಅನುಮತಿ ನೀಡಿದ್ದು, ಇದರ ಬೆನ್ನಲ್ಲೇ, ಅವರನ್ನು ಸಿಬಿಐ ಬಂಧಿಸಿದೆ.
ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಮಂಜೂರು ಮಾಡುವುದಕ್ಕೆ ಹೈಕೋರ್ಟ್ ತಡೆಯಾಜ್ಞೆ ಪ್ರಶ್ನಿಸಿ ಕೇಜ್ರಿವಾಲ್, ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಇದಕ್ಕಿಂತ ಕೆಲ ಗಂಟೆಗಳ ಮುಂಚೆ ಕೇಜ್ರಿವಾಲ್ ಅವರನ್ನು ಸಿಬಿಐ ಅರೆಸ್ಟ್ ಮಾಡಿದೆ.