ಹಾಸನ: ಕಾದಾಟದಲ್ಲಿ ಗಾಯಗೊಂಡಿರುವ ಕಾಡಾನೆಗೆ ಚಿಕಿತ್ಸೆ ನೀಡುತ್ತಿದ್ದ ಅರವಳಿಕೆ ಶಾರ್ಪ್ ಶೂಟರ್ ವೆಂಕಟೇಶ ಅವರ ಮೇಲೆ ಕಾಡಾನೆ ದಾಳಿ ಮಾಡಿದೆ.
ಸಕಲೇಶಪುರ, ಆಲೂರು ತಾಲ್ಲೂಕಿನಲ್ಲಿ ಗಾಯಗೊಂಡು ತಿರುಗಾಡುತಿದ್ದ ಭೀಮ ಕಾಡಾನೆಗೆ ಹೆಚ್ಚಿನ ಚಿಕಿತ್ಸೆ ನೀಡಲು ಅರಣ್ಯ ಇಲಾಖೆ ಸಿಬ್ಬಂದಿ ಗುರುವಾರ ಕಾರ್ಯಾಚರಣೆ ಆರಂಭಿಸಿದ್ದರು. ಆಲೂರು ಸಮೀಪದ ಹಳ್ಳಿಯೂರಿನಲ್ಲಿ ಕಾಡಾನೆಗೆ ಅರವಳಿಕೆ ಮದ್ಧು ನೀಡಲು ಶಾರ್ಪ್ ಶೂಟರ್ ವೆಂಕಟೇಶ್ ಶೂಟ್ ಮಾಡಿದ್ದಾರೆ.
ಆದರೆ ಏಕಾಏಕಿ ಬಂದ ಕಾಡಾನೆ ವೆಂಕಟೇಶ್ ಅವರನ್ನು ತುಳಿದು ಹಾಕಿದೆ. ಇದರಿಂದ ವೆಂಕಟೇಶ್ ಗಂಭೀರ ಗಾಯಗೊಂಡಿದ್ಧು, ಹಾಸನದ ಆಸ್ಪತ್ರೆಗೆ ದಾಖಲಿಸಲಾಗಿದೆ.