ದುಬೈ: ಟೀಂ ಇಂಡಿಯಾ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರು ರವಿಚಂದ್ರನ್ ಅಶ್ವಿನ್ ಅವರನ್ನು ಹಿಂದಿಕ್ಕಿ ವಿಶ್ವದ ನಂಬರ್ ಒನ್ ಟೆಸ್ಟ್ ಬೌಲರ್ ಎನಿಸಿಕೊಂಡಿದ್ದಾರೆ. 30 ವರ್ಷ ಹರೆಯದ ಬುಮ್ರಾ ಅವರು ಇತ್ತೀಚೆಗೆ ಮುಕ್ತಾಯಗೊಂಡ ಭಾರತ-ಬಾಂಗ್ಲಾದೇಶದ ಎರಡನೇ ಟೆಸ್ಟ್‌ನಲ್ಲಿ ಆರು ವಿಕೆಟ್‌ಗಳನ್ನು ಪಡೆದುಕೊಂಡಿದ್ದರು. ಬುಮ್ರಾ 870 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಅಶ್ವಿನ್ 869 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.