ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಂಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ಗುವಾಹಟಿ ಬಳಿ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (IIM) ಸ್ಥಾಪನೆಗೆ ಪ್ರಧಾನಿ ಮೋದಿ ಅನುಮೋದನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಹಿಮಂತ ಬಿಸ್ವಾ ಶರ್ಮಾ, ‘ಅಸ್ಸಾಂನ ಗುವಾಹಟಿ ಬಳಿ ಹೊಸ IIM ಸ್ಥಾಪಿಸಲು ‘ಪ್ರಧಾನಿ ಮೋದಿ ವಿಶೇಷ ಉಡುಗೊರೆ ನೀಡಿದ್ದಾರೆ’ ಎಂದು ಹೇಳಿದ್ದಾರೆ. 2023ರಲ್ಲಿ ನಮ್ಮ ವಿನಂತಿಯನ್ನು ಅನುಸರಿಸಿ, ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರು ಗುವಾಹಟಿ ಬಳಿ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಅನ್ನು ಅನುಮೋದಿಸುವ ಮೂಲಕ ಅಸ್ಸಾಂನ ಜನರಿಗೆ ವಿಶೇಷ ಉಡುಗೊರೆಯನ್ನು ನೀಡಿದ್ದಾರೆ. IIT, AIIMS, ನ್ಯಾಷನಲ್ ಲಾ ಯುನಿವರ್ಸಿಟಿ ಬೆನ್ನಲ್ಲೇ IIMಗೂ ವ್ಯವಸ್ಥೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.