ಗುವಾಹಟಿ: ಅಸ್ಸಾಂ ರಾಜ್ಯದ ಗುವಾಹಟಿ ಜಲುಕ್ಬರಿ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಕನಿಷ್ಟ 7 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಾಯಗಳಾಗಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ.
ಮೃತ 7 ಮಂದಿ ವಿದ್ಯಾರ್ಥಿಗಳಾಗಿದ್ದಾರೆಂದು ಪ್ರಾಥಮಿಕ ತನಿಖಾ ವರದಿಗಳಿಂದ ತಿಳಿದುಬಂದಿದೆ ಎಂದು ಗುವಾಹಟಿಯ ಜಂಟಿ ಪೊಲೀಸ್ ಕಮಿಷನರ್ ತುಬೆ ಪ್ರತೀಕ್ ವಿಜಯ್ ಕುಮಾರ್ ಅವರು ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳದಲ್ಲಿರುವ ಪೊಲೀಸರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿದ್ದು, ಗಾಯಾಳುಗಳಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.