ಅಮರಾವತಿ: ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯ ದಾಚೆಪಲ್ಲಿ ಮಂಡಲದಲ್ಲಿ ಇಂದು ಬೆಳಿಗ್ಗೆ ವೇಗವಾಗಿ ಬಂದ ಲಾರಿಯೊಂದು ಆಟೊರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಐವರು ಮೃತಪಟ್ಟಿದ್ದು, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆಟೊರಿಕ್ಷಾದಲ್ಲಿ 12 ಮಂದಿ ಕಾರ್ಮಿಕರು ರಾಮಾಲಯದ ಕಡೆಗೆ ಪ್ರಯಾಣಿಸುತ್ತಿದ್ದಾಗ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ.
ಪರಿಣಾಮ ಐವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಗುರಜಾಲ ಮತ್ತು ಮಿರ್ಯಾಲಗೂಡ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಡಿಕ್ಕಿಯ ರಭಸಕ್ಕೆ ಮೃತದೇಹಗಳು 50 ಮೀಟರ್ ದೂರದಲ್ಲಿ ಬಿದ್ದಿದ್ದವು ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಆಟೊಗೆ ಡಿಕ್ಕಿ ಹೊಡೆದ ಬಳಿಕ ಲಾರಿ ಚಾಲಕ ವಾಹನ ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದ್ದು, ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.