ಬೆಂಗಳೂರು : ಪ್ರತಿಪಕ್ಷದ ನಾಯಕನ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕೆಂಬ ಬಗ್ಗೆ ಆಗಸ್ಟ್ 15 ರ ನಂತರ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಪಕ್ಷದ ಹೈಕಮಾಂಡ್ ನಾಯಕರು ತಿಳಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇತ್ತೀಚಿನ ದೆಹಲಿಯಲ್ಲಿ ವರಿಷ್ಠರನ್ನು ಭೇಟಿ ಮಾಡಿ ಬೆಂಗಳೂರಿಗೆ ವಾಪಸ್ಸಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಂಸತ್ ಅಧಿವೇಶನ ಸಂದರ್ಭದಲ್ಲಿ ಸಂಸದರನ್ನು ಭೇಟಿ ಮಾಡಲು ದೆಹಲಿಗೆ ಹೋಗಿದ್ದೆ, ಇದೇ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ, ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ಮಾಡಿದ್ದೇನೆ ಎಂದರು. ಮುಂಬರುವ ಲೋಕಸಭೆ ಚುನಾವಣೆಗಾಗಿ ಸಿದ್ದತೆ, ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ, ಸರ್ಕಾರದ ಬಗ್ಗೆ ಜನರ ಅಭಿಪ್ರಾಯ, ಸರ್ಕಾರದ ವಿರುದ್ದ ಮುಂದಿನ ಹೋರಾಟ ಸೇರಿದಂತೆ ಮುಂತಾದ ವಿಷಯಗಳ ಕುರಿತು ಹೈಕಮಾಂಡ್ ಜೊತೆ ನಾನು ಚರ್ಚೆ ಮಾಡಿದ್ದೇನೆ ಎಂದ ಮಾಜಿ ಮುಖ್ಯಮಂತ್ರಿ, ಶೀಘ್ರವೇ ರಾಜ್ಯ ಸರ್ಕಾರದ ಎಲ್ಲ ವೈಫಲ್ಯಗಳ ವಿರುದ್ದ ಬೃಹತ್ ಹೋರಾಟ ರೂಪಿಸಲಾಗುವುದು ಎಂದರು.
[vc_row][vc_column]
BREAKING NEWS
- ಭಾರತ ಕೊಟ್ಟ ಅಧ್ಯಕ್ಷೀಯ ಸೂಟ್ ನಿರಾಕರಿಸಿದ್ದ ಜಸ್ಟಿನ್ ಟ್ರುಡೋ
- ಟಿವಿ ವಾಹಿನಿಗಳಿಗೆ ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ದೇಶನ
- ವಿಶ್ವ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಕಂಚಿನ ಪದಕ ಗೆದ್ದ 19 ವರ್ಷದ ಆಂಟಿಮ್ ಪಂಗಲ್
- ಚೈತ್ರಾ ಹೇಳಿದಂತೆ ಮಾಡಿದ್ದೀನಿ– ಸಿಸಿಬಿ ಮುಂದೆ ತಪ್ಪೊಪ್ಪಿಕೊಂಡ ಅಭಿನವ ಹಾಲಶ್ರೀ..!
- ಖಾಸಗಿ ಶಾಲೆಗಳಿಗೆ ಬಿಗ್ ರಿಲೀಫ್.! ಈ ಮಾನದಂಡಗಳು ಇಲ್ಲ.!
- ಈ ಕಾರಣಕ್ಕೆ ಮೈಸೂರು ದಸರ ಸರಳ.! ಡಾ.ಹೆಚ್.ಸಿ ಮಹದೇವಪ್ಪ
- ಇಂದು ಜೆಡಿಎಸ್- ಬಿಜೆಪಿ ಮೈತ್ರಿ ಬಗ್ಗೆ ಮಹತ್ವದ ದಿನವಾಗುತ್ತಾ.?
- ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆ.!
- ಗಣಪತಿ ವಿಸರ್ಜನೆ : ಈ ದಿನಗಳಲ್ಲಿ ಮದ್ಯ ಮಾರಾಟ ನಿಷೇಧ.!
- ನಾಗಪುರ ದೀಕ್ಷಾ ಭೂಮಿ ಯಾತ್ರೆ; ಅರ್ಜಿ ಆಹ್ವಾನ