Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಆಗಸ್ಟ್‌ 18 ರಿಂದ ಸರ್ಕಾರಿ ಶಾಲೆ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಣೆ : ಮಧು ಬಂಗಾರಪ್ಪ

0

ಶಿವಮೊಗ್ಗ: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ ಜತೆಗೆ ವಾರದಲ್ಲಿ ಎರಡು ಬಾರಿ ಮೊಟ್ಟೆ ಅಥವಾ ಬಾಳೆ ಹಣ್ಣು ನೀಡುವ ಯೋಜನೆಯು ಆಗಸ್ಟ್ 18ರಿಂದ ಆರಂಭವಾಗಲಿದೆ.ಮಂಡ್ಯ ಜಿಲ್ಲೆಯಲ್ಲಿ ಈ ಯೋಜನೆಯು ಉದ್ಘಾಟನೆಗೊಳ್ಳಲಿದೆ ಎಂದು ಪ್ರಾಥಮಿಕ ಹಾಗೂ ಪೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಪೌಷ್ಟಿಕಾಂಶಯುಕ್ತ ಆಹಾರ ನೀಡುವ ಹಿನ್ನಲೆಯಲ್ಲಿ ಈ ಯೋಜನೆಯು ಜಾರಿಗೆ ಬರಲಿದೆ ಎಂದು ಅವರು ತಿಳಿಸಿದ್ದಾರೆ.ವಾರದಲ್ಲಿ ಎರಡು ಬಾರಿ ಒಂದರಿಂದ ಹತ್ತನೇ ತರಗತಿ ಮಕ್ಕಳಿಗೆ ಮೊಟ್ಟೆ ವಿತರಿಸಲಾಗುವುದು. ಮೊಟ್ಟೆ ಸೇವಿಸದ ವಿದ್ಯಾರ್ಥಿಗಳಿಗಾಗಿ ಬಾಳೆಹಣ್ಣನ್ನು ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ಈ ಮೊದಲು 8 ನೇ ತರಗತಿಯವರೆಗೆ ಈ ಯೋಜನೆ ಜಾರಿಗೊಳಿಸಬೇಕು ಎಂದಾಗಿತ್ತು. ಆದರೆ ಈಗ ಹತ್ತನೇ ತರಗತಿವರೆಗೂ ವಿಸ್ತರಿಸಬೇಕು ಎಂಬ ನಿರ್ಧಾರ ಕೈಗೊಳ್ಳಲಾಗಿದೆ.

ರಾಜ್ಯದ ವಿದ್ಯಾರ್ಥಿಗಳು ಅಪೌಷ್ಠಿಕತೆ ಹಾಗೂ ಅನೀಮಿಯಾದಿಂದ ಬಳಲುತ್ತಿರುವುದರಿಂದ ಮೊಟ್ಟೆ ಅಥವಾ ಬಾಳೆಹಣ್ಣು ವಿತರಣೆ ಅನಿವಾರ್ಯವಾಗಿದೆ ಎಂದು ಸರ್ಕಾರ ಪ್ರತಿಪಾದಿಸಿದೆ.

Leave A Reply

Your email address will not be published.