Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

ಆಗಸ್ಟ್ 5ರಂದು ಉದ್ಯೋಗ ಮೇಳ

0

 

ಚಿತ್ರದುರ್ಗ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಮತ್ತು ಡಾನ್ ಬಾಸ್ಕೋ ಪ್ರಥಮ ದರ್ಜೆ ಕಾಲೇಜು ಚಿತ್ರದುರ್ಗ ಇವರ ಸಂಯುಕ್ತಾಶ್ರಯದಲ್ಲಿ ಇದೇ ಆಗಸ್ಟ್ 5ರಂದು  ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಚಿತ್ರದುರ್ಗದ ಚಳ್ಳಕೆರೆ ರಸ್ತೆಯ ಚಿತ್ರ ಡಾನ್ ಬಾಸ್ಕೋ ಸಂಸ್ಥೆ ಆವರಣದಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.

ಮೇಳದಲ್ಲಿ 15ಕ್ಕೂ ಹೆಚ್ಚು ವಿವಿಧ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಾಗುವುದು.

ವಿದ್ಯಾರ್ಹತೆ: ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲಮೋ, ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎಂ ಮತ್ತು ಇತರೆ ಪದವೀಧರು ಭಾಗವಹಿಸಬಹುದು. 18 ರಿಂದ 30 ವರ್ಷದೊಳಗಿರಬೇಕು.

ದಾಖಲೆಗಳು: ಬಯೋಡಾಟಾ 6 ಪ್ರತಿ, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು, ಫೋಟೋಸ್, ಆಧಾರ್ ಕಾರ್ಡ್ ತರಬೇಕು.

ಮೇಳದಲ್ಲಿ ಭಾಗವಹಿಸುವರ ಸಂಸ್ಥೆಗಳು ಖಾಸಗಿ ಸಂಸ್ಥೆಯಾಗಿರುತ್ತದೆ. ಈ ಸಂದರ್ಶನದಲ್ಲಿ ಭಾಗವಹಿಸಲು ಇಚ್ಚಿಸುವ ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಚಿತ್ರದುರ್ಗ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ 7022459064, 8105619020, 9945587060 ಗೆ ಸಂಪರ್ಕಿಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

Your email address will not be published.