ನವದೆಹಲಿ: ಜುಲೈ 31 ರಂದು ಮಧ್ಯಾಹ್ನ 12 ಗಂಟೆಯವರೆಗೆ 11 ಲಕ್ಷಕ್ಕೂ ಹೆಚ್ಚು ಆದಾಯ ತೆರಿಗೆ ರಿಟರ್ನ್ಸ್ (ITR) ಗಳನ್ನು ತೆರಿಗೆದಾರರು ಸಲ್ಲಿಸಿದ್ದಾರೆ. ಈ ಪೈಕಿ 3.39 ಲಕ್ಷ ತೆರಿಗೆ ರಿಟರ್ನ್ಸ್ ಅನ್ನು ಕಳೆದ 1 ಗಂಟೆಯಲ್ಲಿ ಸಲ್ಲಿಸಲಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಹಂಚಿಕೊಂಡ ಮಾಹಿತಿ ತಿಳಿಸಿದೆ. ಐಟಿಆರ್ ಸಲ್ಲಿಸುವ ಗಡುವು ಇಂದು (ಜುಲೈ 31) ಕೊನೆಗೊಳ್ಳಲಿದ್ದು, ಸರ್ಕಾರ ಅದನ್ನು ವಿಸ್ತರಿಸುವ ಸಾಧ್ಯತೆಯಿಲ್ಲ. ವ್ಯಕ್ತಿಗಳು ಮತ್ತು ಎಚ್‌ಯುಎಫ್‌ಗಳಿಗೆ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಇಂದು ಅಂದರೆ ಜುಲೈ 31 ಕೊನೆಯ ದಿನಾಂಕವಾಗಿದ್ದು, ಭಾನುವಾರ ಒಂದೇ ದಿನ 2.7 ಮಿಲಿಯನ್ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಯಾಗಿವೆ ಎಂದು ತಿಳಿದುಬಂದಿದೆ. ಆದಾಯ ತೆರಿಗೆ ಇಲಾಖೆಯ ಇ-ಫೈಲಿಂಗ್ ವೆಬ್‌ಸೈಟ್ ಭಾನುವಾರ ಸಂಜೆ 6:30ರ ವೇಳೆಗೆ 1.3 ಕೋಟಿಗೂ ಹೆಚ್ಚು ಲಾಗಿನ್‌ಗಳಿಗೆ ಸಾಕ್ಷಿಯಾಗಿದ್ದು, ಆದಾಯ ತೆರಿಗೆ ಇಲಾಖೆಯ ಪ್ರಕಾರ, ಭಾನುವಾರ ಸಂಜೆ 6.30 ರವರೆಗೆ ಸುಮಾರು 26.76 ಲಕ್ಷ ಐಟಿಆರ್‌ಗಳನ್ನು ಸಲ್ಲಿಸಲಾಗಿದೆ. ಜುಲೈ 30ರವರೆಗೆ 6 ಕೋಟಿಗೂ ಹೆಚ್ಚು ಐಟಿಆರ್‌ಗಳನ್ನು ಸಲ್ಲಿಸಲಾಗಿದೆ ಎಂದು ತಿಳಿದುಬಂದಿದೆ. ತೆರಿಗೆ ವೃತ್ತಿಪರರು ಮತ್ತು ಚಾರ್ಟರ್ಡ್ ಅಕೌಂಟೆಂಟ್‌ಗಳು ಗಡುವನ್ನು ವಿಸ್ತರಿಸುವ ಸಾಧ್ಯತೆಯಿಲ್ಲ ಎಂದು ಹೇಳಿದ್ದರಿಂದ ಭಾನುವಾರ ರಿಟರ್ನ್ಸ್ ಸಲ್ಲಿಕೆಗೆ ನೂಕುನುಗ್ಗಲು ಕಂಡುಬಂದಿದೆ. AY 2023-24 ಗಾಗಿ ಐಟಿಆರ್ ಅನ್ನು ಸಲ್ಲಿಸದ ಎಲ್ಲರಿಗೂ, ಕೊನೆಯ ಕ್ಷಣದ ಗೊಂದಲ ತಪ್ಪಿಸಿಕೊಳ್ಳಲು ತಮ್ಮ ಐಟಿಆರ್ ಅನ್ನು ಆದಷ್ಟು ಬೇಗ ಸಲ್ಲಿಸುವಂತೆ ತೆರಿಗೆ ಇಲಾಖೆ ಭಾನುವಾರ ಸಂಜೆ ಟ್ವೀಟ್ ಮೂಲಕ ಒತ್ತಾಯಿಸಿದೆ.
[vc_row][vc_column]
BREAKING NEWS
- ಮುರುಘಾ ಶರಣರ ಕೈಗೆ ಬಂತು ಮಠದ ಅಧಿಕಾರ.!
- ಮದುವೆಯಲ್ಲಿ ಕೈತಪ್ಪಿ ಅತಿಥಿಗಳ ಮೇಲೆ ಬಿದ್ದ ಮುಸುರೆ ತಟ್ಟೆಗಳು – ವೇಟರ್ನನ್ನು ಕೊಂದು, ಪೊದೆಗೆ ಎಸೆದ ಪಾಪಿಗಳು ಅರೆಸ್ಟ್
- ಬಿಜೆಪಿ ಮುಖಂಡ ಮಣಿಕಂಠ ರಾಥೋಡ್ ಸುದ್ದಿಗೋಷ್ಠಿಗೂ ಮುನ್ನ ಪೊಲೀಸ್ ವಶಕ್ಕೆ
- ಯುನೆಸ್ಕೋದ ಸಾಂಸ್ಕೃತಿಕ ಪರಂಪರೆಯ ಪಟ್ಟಿಗೆ ಸೇರಿದ ಗಾರ್ಬಾ ನೃತ್ಯ
- ‘ಗೊಡ್ಡು ಬೆದರಿಕೆಗಳಿಗೆ ಹೆದರುವ ಪಕ್ಷ ಬಿಜೆಪಿ ಅಲ್ಲ’- ಬಿ.ವೈ.ವಿಜಯೇಂದ್ರ
- ಲಾರಿ – ಟಾಟಾ ಏಸ್ ನಡುವೆ ಭೀಕರ ಅಪಘಾತ-ನಾಲ್ವರು ಸಾವು
- ಜೈನಮುನಿ ಹತ್ಯೆ ಪ್ರಕರಣ-500ಕ್ಕೂ ಹೆಚ್ಚು ಪುಟಗಳ ಚಾರ್ಜ್ಶೀಟ್ ನ್ಯಾಯಾಲಯಕ್ಕೆ ಸಲ್ಲಿಕೆ
- ದೈವಾರಾಧನೆ ನಮ್ಮ ನೆಲದ ಸಂಸ್ಕೃತಿ ಅದಕ್ಕೆ ಅವಮಾನ ಮಾಡಬೇಡಿ –ರಿಷಬ್ ಶೆಟ್ಟಿ
- ವರದಕ್ಷಿಣೆ ದಾಹಕ್ಕೆ ಬಲಿಯಾದರೆ ಯುವ ವ್ಯದ್ಯೆ ?
- ನಿಮ್ಮ ಪ್ಯಾನ್ ಕಾರ್ಡ್ ಕಳೆದು ಹೋಗಿದ್ಯಾ..? ಡೂಪ್ಲಿಕೇಟ್ ಕಾರ್ಡ್ ಪಡೆಯಲು ಹೀಗೆ ಮಾಡಿ