Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಆರಂಭದಲ್ಲೇ ವಿಘ್ನ: ಎಲ್ಲ ನಿರುದ್ಯೋಗಿಗಳಿಗೆ ಭತ್ಯೆ ಸಿಗೋದಿಲ್ಲ!

0

ಬೆಂಗಳೂರು: ಕಾಂಗ್ರೆಸ್ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಒಟ್ಟು ಐದು ಗ್ಯಾರಂಟಿಗಳನ್ನು ಘೋಷಿಸಿತ್ತು. ಅದರಲ್ಲಿ “ಯುವನಿಧಿ” ಯೋಜನೆ ಕೂಡ ಒಂದು. ನಿರುದ್ಯೋಗಿ ಪದವೀಧರರಿಗೆ ₹3 ಸಾವಿರ ಹಾಗೂ ನಿರುದ್ಯೋಗಿ ಡಿಪ್ಲೊಮಾ ಪದವೀಧರರಿಗೆ ₹1,500 ನೀಡೋದಾಗಿ ಪ್ರಣಾಳಿಕೆಯಲ್ಲಿ ಹೇಳಲಾಗಿತ್ತು. ಈಗ ಚುನಾವಣೆ ಮುಗಿದು ಪೂರ್ಣ ಬಹುಮತದೊಂದಿಗೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಸರಕಾರವೂ ರಚನೆಯಾಗಿದೆ. ಆದ್ರೆ ಈಗ ಕಾಂಗ್ರೆಸ್ ಸರಕಾರ ತಾನು ಘೋಷಿಸಿದ್ದ “ಯುವನಿಧಿ” ಯೋಜನೆಯ ಪ್ರಸ್ತಾವನೆ ಕಂಡು ಯುವಜನರು ದಂಗಾಗಿದ್ದಾರೆ. ಈ ಯೋಜನೆ 2022-23ರಲ್ಲಿ ತೇರ್ಗಡೆಯಾದ ಪದವೀಧರ ನಿರುದ್ಯೋಗಿಗಳಿಗೆ ಮಾತ್ರ ಅನ್ವಯ ಆಗುತ್ತೆ. ಭತ್ಯೆಗಾಗಿ ಅರ್ಜಿ ಸಲ್ಲಿಸಿ ಅರ್ಹ ಫಲಾನುಭವಿಯಾದ ನಂತರದ ಎರಡು ವರ್ಷಗಳವರೆಗೆ ಅಥವಾ ಉದ್ಯೋಗ ಸಿಗುವವರೆಗೆ ಮಾತ್ರ ಭತ್ಯೆ ಸಿಗಲಿದೆ‌. ಈ ಯೋಜನೆಯನ್ನು ಅನುಷ್ಟಾನಗೊಳಿಸುವ ಬಗ್ಗೆ ವಿವರವಾದ ಷರತ್ತು ಮತ್ತು ನಿಬಂಧನೆಗಳನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು ಎಂದು ಸರಕಾರ ತನ್ನ ಪ್ರಸ್ತಾವನೆಯಲ್ಲಿ ತಿಳಿಸಿದೆ.

Leave A Reply

Your email address will not be published.