ನವದೆಹಲಿ: ಹಿರಿಯ ಐಪಿಎಸ್ ಅಧಿಕಾರಿ ರವಿ ಸಿನ್ಹಾ ಅವರು ಭಾರತದ ಬಾಹ್ಯ ಗುಪ್ತಚರ ಸಂಶೋಧನೆ ಮತ್ತು ವಿಶ್ಲೇಷಣಾ ವಿಭಾಗ (ಆರ್‌ಎಡಬ್ಲ್ಯೂ) ಮುಖ್ಯಸ್ಥರಾಗಿ ಸೋಮವಾರ ನೇಮಕಗೊಂಡಿದ್ದಾರೆ.
ಪ್ರಸ್ತುತ ಮುಖ್ಯಸ್ಥರಾಗಿರುವ ಸಮಂತ್ ಗೋಯೆಲ್ ಅವರು ಅಧಿಕಾರಾವಧಿಯನ್ನು ಜೂನ್ 30 ರಂದು ಪೂರ್ಣಗೊಳಿಸಿದ ನಂತರ ಸಿನ್ಹಾ ಅವರು ಎರಡು ವರ್ಷಗಳಿಗೆ ಉತ್ತರಾಧಿಕಾರಿಯಾಗಲಿದ್ದಾರೆ.
ಇನ್ನು ಸಿನ್ಹಾ ಅವರು 1988 ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿದ್ದು, ಪ್ರಸ್ತುತ ಕ್ಯಾಬಿನೆಟ್ ಸೆಕ್ರೆಟರಿಯಟ್‌ನ ವಿಶೇಷ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.