ನವದೆಹಲಿ: ಕೇಂದ್ರದಲ್ಲಿ ಸರಕಾರ ರಚಿಸಬೇಕೆಂಬ ಶತಾಯ-ಗತಾಯ ಪ್ರಯತ್ನದಲ್ಲಿ ಇರುವ ‘ಇಂಡಿ’ ಮೈತ್ರಿಕೂಟಕ್ಕೆ ಮತ್ತೊಂದು ಹಿನ್ನಡೆ ಉಂಟಾಗಿದೆ.
ಶಿವಸೇನೆ ನಾಯಕ ಹಾಗೂ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ‘ಇಂಡಿ’ ಮೈತ್ರಿಕೂಟದ ಸಭೆಗೆ ಹಾಜರಾಗಿಲ್ಲ. ಈ ಮೂಲಕ ಅವರು ಮೈತ್ರಿಕೂಟದಿಂದ ಹೊರಗಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.
ಸದ್ಯ ಶಿವಸೇನೆಯ ಉದ್ಧವ್ ಠಾಕ್ರೆ ಬಣ ಯಾವ ಮೈತ್ರಿಕೂಟಕ್ಕೆ ಬೆಂಬಲಿಸಲಿದ್ದಾರೆ ಎಂಬ ಬಗ್ಗೆ ಸ್ಪಷ್ಟನೆ ನೀಡಿಲ್ಲ. ಹಾಗಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಉದ್ಧವ್ ಠಾಕ್ರೆ ಅವರಿಗೆ ಗಾಳ ಹಾಕುವ ಪ್ರಯತ್ನದಲ್ಲಿದ್ದಾರೆ.