ದೆಹಲಿ: ಕೆಲವು ವಿದೇಶಿ ವಿಶ್ವವಿದ್ಯಾನಿಲಯಗಳು ಅನುಮತಿಯಿಲ್ಲದೆ ಕ್ಯಾಂಪಸ್‌ಗಳನ್ನು ಸ್ಥಾಪಿಸಿದ್ದಲ್ಲದೇ, ಇಲ್ಲಿನ ಉನ್ನತ ಶಿಕ್ಷಣ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಂಡಿವೆ ಎಂದು ಯುಜಿಸಿ ಬಹಿರಂಗಪಡಿಸಿದೆ.
ಸಂಸ್ಥೆಗಳು ನೀಡುವ ಆನ್‌ಲೈನ್ ಪದವಿ ಹಾಗೂ ಡಿಪ್ಲೊಮಾ ಕೋರ್ಸ್‌ಗಳಿಗೆ ಮಾನ್ಯತೆ ಇಲ್ಲ, ವಿದ್ಯಾರ್ಥಿಗಳು ಎಚ್ಚರದಿಂದಿರಬೇಕು. ಕೆಲ ಸಂಘಟನೆಗಳು ಪತ್ರಿಕೆ, ವಾಹಿನಿಗಳಲ್ಲಿ ಜಾಹೀರಾತು ನೀಡುತ್ತಿರುವುದು ಗಮನಕ್ಕೆ ಬಂದಿದ್ದು, ಶೀಘ್ರವೇ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅದು ಹೇಳಿದೆ.