Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಇಂದಿನಿಂದ ನಾಲ್ಕು ದಿನಗಳ ಕಾಲ ಈ ಜಿಲ್ಲೆಗಳಲ್ಲಿ ಭಾರೀ ಮಳೆ.!

0

ಬೆಂಗಳೂರು: ಇಂದಿನಿಂದ ನಾಲ್ಕು ದಿನಗಳ ಕಾಲ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ   ಹಿನ್ನೆಲೆ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಿದೆ.

ಮುಂದಿನ ನಾಲ್ಕು ದಿನ ಕರಾವಳಿ ಭಾಗದಲ್ಲಿ ಗಾಳಿ ಗಂಟೆಗೆ 30 ರಿಂದ 40 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಈ ಹಿನ್ನೆಲೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಮುಂದಿನ ನಾಲ್ಕು ದಿನ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ.

ಉತ್ತರ ಒಳನಾಡು ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಇನ್ನು ಈ ಜಿಲ್ಲೆಗಳಲ್ಲಿ ಗಾಳಿಯ ವೇಗವು ಗಂಟೆಗೆ 30-40 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಆದರೆ ಬೆಳಗಾವಿ, ಬೀದರ ಮತ್ತು ಕಲಬುರಗಿ ಜಿಲ್ಲೆಗಳಿಗೆ ದಿನಾಂಕ ಜು. 19 ಮತ್ತು 20 ರಂದು ಭಾರಿ ಮಳೆಯಾಗಲಿದೆ.

Leave A Reply

Your email address will not be published.