Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಇಂದಿನಿಂದ 3 ದಿನ ವಿಧಾನಸಭೆ ವಿಶೇಷ ಅಧಿವೇಶನ

0

ಬೆಂಗಳೂರು: ಭರ್ಜರಿ ಗೆಲುವಿನೊಂದಿಗೆ ಅಧಿಕಾರ ಹಿಡಿದಿರುವ ಕಾಂಗ್ರೆಸ್​​​​​​​​ ಸರ್ಕಾರದ ಮೊದಲ ಅಧಿವೇಶನ ಇಂದಿನಿಂದ 3 ದಿನಗಳ ಕಾಲ ನಡೆಯಲಿದೆ. ಮೊದಲ ಎರಡು ದಿನ ನೂತನ ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಇದೇ 24ರಂದು ಖಾಯಂ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ರಾಜ್ಯದಲ್ಲಿ ಮುಂದಿನ 5 ವರ್ಷಗಳವರೆಗೆ ಅಧಿಕಾರ ಹಿಡಿದಿರುವ ಕಾಂಗ್ರೆಸ್ ಸರ್ಕಾರದ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ಮೊದಲ 2 ದಿನಗಳ ಕಾಲ ಶಾಸಕರ ಪ್ರಮಾಣ ಸ್ವೀಕಾರ ನಡೆಯಲಿದ್ದು, 3ನೇ ದಿನ ಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಇಂದು ಬೆಳಗ್ಗೆ 10 ಗಂಟೆಗೆ ರಾಜಭವನದಲ್ಲಿ ಪ್ರಮಾಣ ಸ್ವೀಕಾರ ಕಾರ್ಯಕ್ರಮ ನಡೆಯಲಿದ್ದು, ಮೊದಲು ರಾಜ್ಯಪಾಲರು ಹಂಗಾಮಿ ಸಭಾಧ್ಯಕ್ಷರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಸದ್ಯ ಹಂಗಾಮಿ ಸ್ಪೀಕರ್ ಆಗಿ ಕಾಂಗ್ರೆಸ್​ ಹಿರಿಯ ಶಾಸಕ ಆರ್.ವಿ. ದೇಶಪಾಂಡೆಯವರನ್ನ ನೇಮಿಸಲಾಗಿದೆ. 3 ದಿನಗಳ ಸದನದ ಕಾರ್ಯಕಲಾಪಗಳನ್ನು ಆರ್​.ವಿ.ದೇಶಪಾಂಡೆ ನಡೆಸಲಿದ್ದಾರೆ. ಇನ್ನು ಇವತ್ತು ಮತ್ತು ನಾಳೆ ವಿಧಾನಸಭೆ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಲಿರುವ ಎಲ್ಲಾ ಶಾಸಕರಿಗೆ ಹಂಗಾಮಿ ಸ್ಪೀಕರ್​ ಆರ್.ವಿ. ದೇಶಪಾಂಡೆ ಪ್ರಮಾಣವಚನ ಬೋಧಿಸಲಿದ್ದಾರೆ.

Leave A Reply

Your email address will not be published.