Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಇಂದು ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಲಿರುವ ಸಿಎಂ ಸಿದ್ದರಾಮಯ್ಯ

0

ಬೆಂಗಳೂರು: ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆಯಿಂದ ಹಲವು ಕಡೆ ಸಾವು-ನೋವು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯನವರು ಇಂದು ಆಯಾ ಜಿಲ್ಲಾಧಿಕಾರಿಗಳೊಂದಿಗೆ ವಿಶೇಷ ಸಭೆ ನಡೆಸಲಿದ್ದಾರೆ.

ಇಂದು ಮಧ್ಯಾಹ್ನ 3 ಗಂಟೆಗೆ ವಿಧಾನಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಒಗಳ ಜೊತೆ ವಿವಿಧ ಭಾಗಗಳಲ್ಲಿ ಮಳೆಯಿಂದ ಆದ ಅನಾಹುತಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲಿದ್ದಾರೆ.

ನಾಗ್ಪುರ-ಪುಣೆ ಹೆದ್ದಾರಿಯಲ್ಲಿ ಬಸ್​ ಹಾಗೂ ಟ್ರಕ್ ಮುಖಾಮುಖಿ ಡಿಕ್ಕಿ, 7 ಮಂದಿ ಸಾವು

ಆ ಬಳಿಕ, ಮಳೆ ಜೋರಾಗಿರುವ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಲಹೆ-ಸೂಚನೆಗಳನ್ನು ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Leave A Reply

Your email address will not be published.