ಬೆಂಗಳೂರು: ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ಧರಿಸಿದೆ. ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಯಲಿದ್ದು, ಬಳಿಕ 11 ಗಂಟೆಗೆ ವೆಬ್ಸೈಟ್ನಲ್ಲಿ ವಿಜ್ಞಾನ, ವಾಣಿಜ್ಯ, ಕಲೆ ವಿಭಾಗ ಸೇರಿದಂತೆ ಎಲ್ಲ ವಿಭಾಗಗಳ ಫಲಿತಾಂಶವನ್ನು ಏಕಕಾಲದಲ್ಲಿ ಪ್ರಕಟಿಸಲಾಗುತ್ತದೆ.
karresults.nic.in ಅಥವಾ pue.kar.nic ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ.
ಮುಖಪುಟದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
ಲಾಗಿನ್ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆಯೊಂದಿಗೆ ಯಾವ ವಿಭಾಗವೆಂದು ಅಂದರೆ ವಿಜ್ಞಾನ, ವಾಣಿಜ್ಯ ಮತ್ತು ಕಲೆ ಆಯ್ಕೆ ಮಾಡಿಕೊಳ್ಳಿ.
ಕ್ಲಿಕ್ ಮಾಡಿದಾಗ ನಿಮಗೆ ಫಲಿತಾಂಶವು ಸ್ಕ್ರೀನ್ ಮೇಲೆ ಕಾಣಿಸುತ್ತದೆ.
ಬಳಿಕ ಫಲಿತಾಂಶವನ್ನು ಡೌನ್ಲೋಡ್ ಮಾಡಿಕೊಳ್ಳಿ.