Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

[/vc_column][/vc_row]

ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

0

ಬೆಂಗಳೂರು: ಇಂದು (ಮೇ 12) ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕರ್ನಾಟಕ ಹವಾಮಾನ ಇಲಾಖೆ ಮುಂದಿನ 48 ಗಂಟೆಗಳ ಹವಾಮಾನ ಮುನ್ಸೂಚನೆ ಪ್ರಕಟಿಸಿದ್ದು, ವಿಶೇಷವಾಗಿ ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲೂ ಮಳೆಯಾಗುವ ಸಂಭವವಿದೆ. ಹವಾಮಾನ ಇಲಾಖೆಯು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಿರುವ ಮುನ್ಸೂಚನೆಯ ಪ್ರಕಾರ ಇನ್ನೂ ಎರಡು ದಿನಗಳ ಕಾಲ ರಾಜ್ಯದಲ್ಲಿ ಗುಡುಗು, ಮಿಂಚಿನಿಂದ ಕೂಡಿದ ಭಾರಿ ಮಳೆಯಾಗಲಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ಇದೆ.

ಎಡಗೈ ನೋವಿನಿಂದ ಬಳಲುತ್ತಿರುವ ಸಿದ್ದರಾಮಯ್ಯ: ನಿವಾಸಕ್ಕೆ ಆಗಮಿಸಿದ ವೈದ್ಯರು

ಇಂದು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದ್ದು, ಬೆಳಗಾವಿ, ಧಾರವಾಡ, ಹಾವೇರಿಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬಾಗಲಕೋಟೆ, ಬೀದರ್‌, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.

 

Leave A Reply

Your email address will not be published.