ಇನ್ನೂ 3 ದಿನ ಬಾಕಿ: ಬಿಎಂಟಿಸಿಯಲ್ಲಿ 2500 ನಿರ್ವಾಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು.!

 

ಬೆಂಗಳೂರು:ಬಿಎಂಟಿಸಿಯಲ್ಲಿ ಖಾಲಿ ಇರುವಂತ 2500 ನಿರ್ವಾಹಕರ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಏಪ್ರಿಲ್ 10 ಕೊನೆಯ ದಿನವಾಗಿದೆ.

ಈ ಕುರಿತಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ನಿರ್ವಾಹಕ ದರ್ಜೆ-3 ಮೇಲ್ವಿಚಾರಕೇತರ ಹುದ್ದೆಗಳನ್ನು ಭರ್ತಿ ಮಾಡಲು ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿರುವುದಾಗಿ ತಿಳಿಸಿದೆ.

Advertisement

ಹುದ್ದೆಗಳ ವಿವರ

ಮಿಕ್ಕುಳಿದ ವೃಂದ -2286 ಹುದ್ದೆಗಳು

ಸ್ಥಳೀಯ ವೃಂದ – 199 ಹುದ್ದೆಗಳು ಹಾಗೂ ಹಿಂಬಾಕಿ 15 ಹುದ್ದೆಗಳು ಸೇರಿ 214 ಹುದ್ದೆಗಳು

ಶೈಕ್ಷಣಿಕ ವಿದ್ಯಾರ್ಹತೆ

ಪಿಯುಸಿ ಆರ್ಟ್ಸ್, ಕಾಮರ್ಸ್, ಸೈನ್ಸ್ ನಲ್ಲಿ ಉತ್ತೀರ್ಣರಾಗಿರಬೇಕು. ಅಥವಾ 10+2 ಐಸಿಎಸ್ಇ, ಸಿಬಿಎಸ್ಇರಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ತತ್ಸಮಾನ ವಿದ್ಯಾಹ್ರತೆ ಅಂದರೆ ತಾಂತ್ರಿಕ ಶಿಕ್ಷಣ ಇಲಾಖೆಯಿಂದ 3 ವರ್ಷಗಳ ಡಿಪ್ಲೋಮಾದಲ್ಲಿ ಉತ್ತೀರ್ಣರಾಗಿರತಕ್ಕದ್ದು.

ಮಾನ್ಯತೆ ಹೊಂದಿರುವ ಮೋಟಾರು ವಾಹನ ನಿರ್ವಾಹಕ ಪರವಾನಗಿ ಮತ್ತು ಬ್ಯಾಡ್ಜ್ ಅನ್ನು ಹೊಂದಿರಬೇಕು.

ವಯೋಮಿತಿ

ಸಾಮಾನ್ಯ ವರ್ಗದವರಿಗೆ 35 ವರ್ಷಗಳು. 2ಎ, 2ಬಿ, 3ಎ, 3ಬಿ ವರ್ಗದವರಿಗೆ 38 ವರ್ಷಗಳು. ಎಸ್ಸಿ, ಎಸ್ಟಿ, ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷ. ಮಾಜಿ ಸೈನಿಕ, ಇಲಾಖಾ ಅಭ್ಯರ್ಥಿಗಳಿಗೆ 45 ವರ್ಷ.

ವೇತನ ಶ್ರೇಣಿ – ರೂ.18,660ರಿಂದ 25,300

ಅರ್ಜಿ ಸಲ್ಲಿಸುವ ವಿಧಾನ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ http://kea.kar.nic.in ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಪ್ರಮುಖ ದಿನಾಂಕಗಳು

ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ದಿನಾಂಕ 10-03-2024ರಿಂದ ಪ್ರಾರಂಭವಾಗಲಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10-04-2024 ಆಗಿದೆ. ಶುಲ್ಕ ಪಾವತಿಸಲು ಕೊನೆಯ ದಿನಾಂಕ 13-04-2024 ಆಗಿರುತ್ತದೆ.

ಅರ್ಜಿ ಶುಲ್ಕ

ಸಾಮಾನ್ಯ ಅರ್ಹತೆ ಹಾಗೂ ಪ್ರವರ್ಗ 2ಎ, 2ಬಿ, 3ಎ, 3ಬಿ ವರ್ಗದವರಿಗೆ ರೂ.750. ಎಸ್ಸಿ, ಎಸ್ಟಿ ಪ್ರವರ್ಗ-1, ಮಾಜಿ ಸೈನಿಕರರು ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ.500.

.

Add a comment

Leave a Reply

Your email address will not be published. Required fields are marked *

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement