ಹುಬ್ಬಳ್ಳಿ ; ಗಣೇಶ ಹಬ್ಬ ನಮ್ಮ ಭಾಗದಲ್ಲಿ ವಿಜೃಂಭಣೆಯಿಂದ ಮಾಡುತ್ತೇವೆ. ಡಿಜೆ ಸೇರಿದಂತೆ ಯಾವುದೇ ನಿರ್ಬಂಧ ಹೇರಬಾರದು. ಹುಬ್ಬಳ್ಳಿಯ ಈದ್ಗಾ ಮೈದಾನ ಸಾರ್ವಜನಿಕರ ಆಸ್ತಿ. ಕಳೆದ ಬಾರಿ ಗಣೇಶ ಕೂರಿಸಿದ್ದೇವೆ. ಈದ್ಗಾ ಮೈದಾನ ಮುಸ್ಲಿಮರ ಜಾಗವಲ್ಲ, ಅವರು ವಿವಾದ ಮಾಡಬಾರದು. ಅವರಿಗೂ ವರ್ಷದಲ್ಲಿ ಎರಡು ಬಾರಿ ನಮಾಜ್‌ಗೆ ಅವಕಾಶವಿದೆ. ಈ ಕುರಿತು ಮಹಾನಗರ ಪಾಲಿಕೆ ಸೂಕ್ತ ತೀರ್ಮಾನ ಮಾಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿ, ಬಾಂಬೆ ಬಾಯ್ಸ್ ಕಾಂಗ್ರೆಸ್ ಸೇರ್ಪಡೆ ವಿಚಾರ, ಸದ್ಯದ ಮಟ್ಟಿಗೆ ನನಗೆ ಹೆಚ್ಚಿನ ಮಾಹಿತಿಯಿಲ್ಲ. ಈ ಬಗ್ಗೆ ರಾಜ್ಯಾಧ್ಯಕ್ಷರಿಗೆ ಮಾತಾಡಿದ್ದೇನೆ. ಆ ರೀತಿ ಯಾವುದೇ ಬೆಳವಣಿಗೆ ಆಗಿಲ್ಲ ಎಂದಿದ್ದಾರೆ. ಸೋಮಶೇಖರ್, ಹೆಬ್ಬಾರ್ ಪಕ್ಷ ಬಿಟ್ಟು ಹೋಗಲ್ಲ ಎಂದಿದ್ದಾರೆ. ನಾಳೆ ಏನಾಗುತ್ತೆ ಅಂತಾ ಹೇಳಲು ನಾನು ಭವಿಷ್ಯಗಾರ ಅಲ್ಲ. ನನಗೆ ಇರುವ ಮಾಹಿತಿ ಪ್ರಕಾರ ಯಾರೂ ಬಿಜೆಪಿ ಬಿಟ್ಟು ಹೋಗಲ್ಲ. ಮುನೇನಕೊಪ್ಪ ಕೂಡ ನನ್ನೊಂದಿಗೆ ಮಾತನಾಡಿದ್ದು, ಅವರು ಪಕ್ಷ ತೊರೆಯಲ್ಲ ಅಂದಿದ್ದಾರೆ. ಇನ್ನು, ಲೋಕಸಭಾ ಚುನಾವಣೆಯಲ್ಲಿ ನಾನು ಧಾರವಾಡದಿಂದಲೇ ಸ್ಪರ್ಧಿಸುತ್ತೇನೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
[vc_row][vc_column]
BREAKING NEWS
- ‘ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ನ ಲೆಕ್ಕಾಚಾರದ ತಂತ್ರಗಳು ಕೆಲಸ ಮಾಡುವುದಿಲ್ಲ’- ಬಿಎಸ್ವೈ
- ಬೆಳಗಾವಿ : ಮಂತ್ರಿಗಳೆಲ್ಲ ತೆಲಂಗಾಣಕ್ಕೆ ಹೋಗಿ ಅಲ್ಲಿನ ಎಂಎಲ್ಎ ಗಳ ಸೇವೆ ಮಾಡ್ತಿದ್ದಾರೆ – ವಿಪಕ್ಷ ನಾಯಕ ಆರ್ ಅಶೋಕ ಕಿಡಿ
- 10 ಮಂದಿ ಬಿಜೆಪಿ ಸಂಸದರು ಸಂಸತ್ ಸ್ಥಾನಗಳಿಗೆ ರಾಜೀನಾಮೆ
- ಸರಕಾರಿ ಹುದ್ದೆಗಳ ನೇಮಕಾತಿ ಅಕ್ರಮ ತಡೆಗಟ್ಟಲು ವಿಧೇಯಕ ಮಂಡನೆ
- ಉಧಂಪುರ ದಾಳಿ ಸಂಚುಕೋರ, 26/11 ಮಾಸ್ಟರ್ ಮೈಂಡ್ ಹಫೀಜ್ ಸಯೀದ್ನ ಸಹಾಯಕ ಪಾಕ್ನಲ್ಲಿ ಹತ್ಯೆ
- ಕೊನೆಗೂ ಉರ್ಫಿ ಜಾವೇದ್ ಇನ್ಸ್ಟಾಗ್ರಾಮ್ ಅಕೌಂಟ್ ಡಿಲೀಟ್
- ‘ತೊಡೆಯ ಮೇಲೆ ಕೂರಿಸಿಕೊಂಡು ಮುದ್ದಾಡುತ್ತಿದ್ದವರು ಈಗ ಮುಸ್ಲಿಂ ದ್ವೇಷಿ’- ಹೆಚ್ಡಿಕೆಗೆ ದಿನೇಶ್ ಗುಂಡೂರಾವ್ ಟಾಂಗ್
- ಕೊಳವೆ ಬಾವಿಗೆ ಬಿದ್ದ ಬಾಲಕಿ ಚಿಕಿತ್ಸೆ ಫಲಿಸದೆ ಮೃತ್ಯು
- ಗುರಿ ತಪ್ಪಿದ ಸೇನಾ ಡ್ರೋನ್ ದಾಳಿ; 85 ಮಂದಿ ನಾಗರಿಕರು ಮೃತ್ಯು
- ಪ್ಯಾಕಿಂಗ್ ಆಹಾರ ಉತ್ಪನ್ನಗಳಿಂದ ಹೊಟ್ಟೆಗೆ ಸಂಬಂಧಿಸಿದ ಕಾಯಿಲೆ ಹೆಚ್ಚಾಗಿ ಕಾಣಿಸುತ್ತದೆ – ಏಮ್ಸ್ ವರದಿ