ಬೆಂಗಳೂರು: ಸಂಘಟನೆಯ ಪ್ರತಿನಿಧಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಗುರುವಾರ ನಡೆಸಿದ ಮನವೊಲಿಕೆ ಸಭೆ ವಿಫಲವಾಗಿದ್ದು, ಪ್ರತಿಭಟನೆ ನಡೆಯುವುದು ಬಹುತೇಕ ಖಚಿತವಾಗಿದೆ. ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಗಸ್ಟ್ 12 ರಂದು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಪ್ರತಿಭಟನೆಗೆ ಕರೆ ನೀಡಿದೆ.
ಪದವಿ ಪೂರ್ಣಗೊಳಿಸಿದ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಿ ಬಡ್ತಿ ನೀಡಬೇಕು. 2017ರ ಹೊಸ ವೃಂದ ನೇಮಕಾತಿಗಳನ್ನು 2016ರ ಮೊದಲು ನೇಮಕವಾದವರಿಗೆ ಪೂರ್ವಾನ್ವಯಗೊಳಿಸಬಾರದು. ಬಡ್ತಿ ವಿಚಾರದಲ್ಲಿ ಆಗುತ್ತಿರುವ ಅನ್ಯಾಯ ಸರಿಪಡಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರಾಥಮಿಕ ಶಾಲಾ ಶಿಕ್ಷಕರು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.