ಇಸ್ಲಾಮಾಬಾದ್: ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ಬಿಎಸ್ಎಫ್ ಬೆಂಗಾವಲು ಪಡೆ ಮೇಲೆ 2015ರಲ್ಲಿ ನಡೆದ ದಾಳಿಯ ಮಾಸ್ಟರ್ ಮೈಂಡ್ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ಹಂಝ್ಲಾ ಅದ್ನಾನ್ನನ್ನು ಪಾಕಿಸ್ತಾನದ ಕರಾಚಿಯಲ್ಲಿ ಗುಂಡಿಕ್ಕಿ ಕೊಲೆ ಮಾಡಲಾಗಿದೆ ಎಂದು ವರದಿಯಾಗಿದೆ. ಹಂಝ್ಲಾ ಅದ್ನಾನ್ 26/11 ಮುಂಬೈ ದಾಳಿಯ ಮಾಸ್ಟರ್ಮೈಂಡ್ ಹಾಗೂ ಎಲ್ಇಟಿ ಮುಖ್ಯಸ್ಥ ಹಫೀಜ್ ಸಯೀದ್ ಜೊತೆ ನಿಕಟ ಸಂಪರ್ಕ ಹೊಂದಿದ್ದ ಎಂದು ಹೇಳಲಾಗಿದೆ. ಡಿಸೆಂಬರ್ 2 ಮತ್ತು 3ರ ಮಧ್ಯರಾತ್ರಿಯಲ್ಲಿ ಹಂಝ್ಲಾ ಅದ್ನಾನ್ನನ್ನು ಆತನ ಮನೆಯ ಹೊರಗೆ ಕೊಲ್ಲಲಾಗಿದೆ ಎಂದು ವರದಿಯಾಗಿದೆ.
![](https://bcsuddi.com/wp-content/uploads/2025/02/WhatsApp-Image-2025-02-05-at-6.18.34-PM.jpeg)