ತಮಿಳುನಾಡು: ನಿರ್ಮಾಣ ಹಂತದ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಆರು ಮಂದಿ ಕಾರ್ಮಿಕರು ಮೃತಪಟ್ಟಿರುವ
ಘಟನೆ ಊಟಿಯಲ್ಲಿ ಲವ್ಡೇಲ್ ಬಳಿ ಈ ದುರ್ಘಟನೆ ಬುಧವಾರ ಸಂಭವಿಸಿದೆ.
ಘಟನೆಯಲ್ಲಿ ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಓರ್ವ ಇನ್ನೂಅವಶೇಷಗಳಡಿ ಸಿಲುಕಿರುವುದಾಗಿ ವರದಿ ಆಗಿದೆ.ಗಂಭೀರ ಗಾಯಗೊಂಡವರನ್ನು ಊಟಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಸ್ಥಳದಲ್ಲಿ ರಕ್ಷಣಾ ತಂಡದಿಂದ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.