ಡೂಪ್ಲಿ ಕೇಟ್ ವೆಬ್‌ಸೈಟ್‌ನಲ್ಲಿ HSRP ನಂಬರ್ ಪ್ಲೇಟ್ ಹಾಕಿಸಿದ್ರೆ ಕ್ರಿಮಿನಲ್ ಕೇಸ್ ಹಾಕಿ ಜೈಲಿಗೆ ಕಳುಹಿಸುವುದಾಗಿ ಸಚಿವ ರಾಮಲಿಂಗಾ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿ, HSRP ನಂಬರ್ ಪ್ಲೇಟ್ಅಳವಡಿಕೆಯಲ್ಲಿ ಯಾವುದೇ ಗೊಂದಲ ಇಲ್ಲ, ಸದ್ಯ ನಂಬರ್ ಪ್ಲೇಟ್ ಅಳವಡಿಸಲು 3ತಿಂಗಳು ಕಾಲಾವಕಾಶ ನೀಡಲಾಗಿದೆ.
ನಂಬರ್ ಪ್ಲೇಟ್ ಆಳವಡಿಕೆ ಮಾಡಲು ಆನೈನ್ ಮೂಲಕ ನೋಂದಣಿ ಮಾಡಿಸಬೇಕಾಗಿದ್ದು ಈ ಸಮಯದಲ್ಲಿ ತಾಂತ್ರಿಕ ತೊಂದರೆಗಳು ಉಂಟಾದರೆ ಅದನ್ನು ಬಗೆಹರಿಸಲು ಸಹಾಯವಾಣಿಯನ್ನು ಸಾರಿಗೆ ಇಲಾಖೆ ಆರಂಭಿಸಿದೆ ಎಂದು ಸಚಿವರು ತಿಳಿಸಿದ್ದಾರೆ.