Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

‘ಎನ್‍ಇಪಿ ರದ್ದುಗೊಳಿಸಲು ಮುಂದಾದರೆ ಜನಾಂದೋಲನ ನಡೆಯಲಿದೆ’ – ಬೊಮ್ಮಾಯಿ ಎಚ್ಚರಿಕೆ

0

ಬೆಂಗಳೂರು: ರಾಜ್ಯ ಸರಕಾರ ರಾಷ್ಟ್ರೀಯ ಶಿಕ್ಷಣ ನೀತಿ(ಎನ್‍ಇಪಿ)ಯನ್ನು ರದ್ದುಗೊಳಿಸಲು ಮುಂದಾದರೆ ಜನಾಂದೋಲನ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ ಸರಕಾರ ಎನ್‍ಇಪಿ ವಿರೋಧ ಮಾಡುತ್ತಿರುವುದರಲ್ಲಿ ಆಶ್ಚರ್ಯ ಇಲ್ಲ. ಅಷ್ಟೊಂದು ವಿಸಿಗಳನ್ನು ಕೂಡಿಸಿಕೊಂಡು ಯಾವುದೇ ಚರ್ಚೆ ಮಾಡದೇ ನಿರ್ಣಯ ಕೈಗೊಂಡಿದ್ದಾರೆ. ಅದನ್ನು ಕುಲಪತಿಗಳು ಪ್ರಶ್ನೆ ಮಾಡದೇ ಸುಮ್ಮನೇ ಎದ್ದು ಬಂದಿರುವುದು ದುರಂತ ಎಂದರು.

ಇನ್ನು ಜನರು ಅಭಿವೃದ್ಧಿ ಮಾಡಲು ಅಧಿಕಾರ ಕೊಟ್ಟಿದ್ದಾರೆ, ಹೊರತು ರಾಜ್ಯವನ್ನು ಹಿಂದೆ ಕಳುಹಿಸಲು ಅಲ್ಲ. ಅದಕ್ಕೆ ಪ್ರಜಾಪ್ರಭುತ್ವದಲ್ಲಿ ಅವಕಾಶ ಇಲ್ಲ. ಈ ದೇಶದಲ್ಲಿ ದೊಡ್ಡವರು ತಪ್ಪು ಮಾಡಿದಾಗ ಜನರು ದೊಡ್ಡ ಹೋರಾಟಗಳ ಮೂಲಕ ಬದಲಾವಣೆ ತಂದಿದ್ದಾರೆ ಎಂದು ಹೇಳಿದ್ದಾರೆ.

Leave A Reply

Your email address will not be published.