Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

ಎಲೆಕ್ಟ್ರಿಕ್ ಮಲ್ಟಿಪಲ್ ಯೂನಿಟ್ ರೈಲು ಪ್ಲಾಟ್ಫಾರ್ಮ್ಗೆ ನುಗ್ಗಿತು.!

0

 

ಲಖನೌ: ಉತ್ತರಪ್ರದೇಶದ ಮಥುರಾ ರೈಲು ನಿಲ್ದಾಣದಲ್ಲಿ ಎಲೆಕ್ಟ್ರಿಕ್ ಮಲ್ಟಿಪಲ್ ಯೂನಿಟ್ (ಇಎಂಯು) ರೈಲು ಏಕಾಏಕಿ ಪ್ಲಾಟ್ಫಾರ್ಮ್ಗೆ ನುಗ್ಗಿದ್ದು, ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ.

ಎಲ್ಲಾ ಪ್ರಯಾಣಿಕರು ರೈಲಿನಿಂದ ಇಳಿದಿದ್ದರು. ಹಾಗಾಗಿ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆ ಸಂಬಂಧ ತನಿಖೆ ನಡೆಸುತ್ತಿರುವುದಾಗಿ ಮಥುರಾ ರೈಲು ನಿಲ್ದಾಣದ ನಿರ್ದೇಶಕ ಎಸ್.ಕೆ ಶ್ರೀವಾಸ್ತವ ತಿಳಿಸಿದ್ದಾರೆ.

ಶಕುರ್ ಬಸ್ತಿಯಿಂದ ರೈಲು ರಾತ್ರಿ 10:49ಕ್ಕೆ ಮಥುರಾ ನಿಲ್ದಾಣಕ್ಕೆ ಬಂದಿದ್ದು, ಎಲ್ಲಾ ಪ್ರಯಾಣಿಕರು ರೈಲಿನಿಂದ ಇಳಿದಿದ್ದರು. ಇದಾದ ಕೆಲವೇ ಕ್ಷಣಗಳಲ್ಲಿ ಇದ್ದಕ್ಕಿದ್ದಂತೆ ರೈಲು ಪ್ಲಾಟ್ಫಾರ್ಮ್ಗೆ ಏರಿದೆ. ಘಟನೆಯಿಂದ ಇತರೆ ರೈಲುಗಳ ಸಂಚಾರಕ್ಕೆ ತೊಂದರೆಯಾಗಿದೆ ಎಂದು ಶ್ರೀವಾಸ್ತವ ಹೇಳಿದ್ದಾರೆ.

Leave A Reply

Your email address will not be published.