Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

‘ಎಸ್‌ಇಪಿ ಅಂದ್ರೆ ಸೋನಿಯಾ ಗಾಂಧಿ ಶಿಕ್ಷಣ ನೀತಿಯೇ? -ಬಿಸಿ ನಾಗೇಶ್‌

0

‘ರಾಜ್ಯ ಸರ್ಕಾರವು ಎನ್‌ಇಪಿಯನ್ನು ರದ್ದುಗೊಳಿಸಿರುವುದಕ್ಕೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.ಈ ಬಗ್ಗೆ ಮಾಜಿ ಶಿಕ್ಷಣ ಸಚಿವ ಬಿಸಿ ನಾಗೇಶ್‌ ಟ್ವೀಟ್‌ ಮಾಡಿದ್ದು ʻಡಿಸಿಎಂ ಡಿಕೆ ಶಿವಕುಮಾರ್‌ ಅವರೇ, ನೀವೀಗ ರಾಜ್ಯದಲ್ಲಿ ಎಸ್‌ಇಪಿ ಮೂಲಕ ಸೋನಿಯಾ ಶಿಕ್ಷಣ ನೀತಿಯನ್ನು ಜಾರಿಗೆ ತರಲು ಹೊರಟ್ಟಿದ್ದೀರಾ ಎಂದು ಪ್ರಶ್ನಿಸಿದ್ದಾರೆ.

ರಾಜ್ಯ ಶಿಕ್ಷಣ ನೀತಿಯನ್ನು ಬದಲಾಯಿಸಲು ಹೊರಟ ಸರ್ಕಾರದ ಕ್ರಮವನ್ನು ಖಂಡಿಸಿರುವ ಅವರು ಡಿಕೆಶಿ ಅವರಿಗೆ ಆರು ಪ್ರಶ್ನೆಗಳನ್ನು ಕೇಳಿದ್ದಾರೆ

ಆರು ಪ್ರಶ್ನೆಗಳು:

ಬಡವ, ಶ್ರೀಮಂತ ಎನ್ನದೇ ಸರ್ವರಿಗೂ ಕೌಶಲ್ಯ ಆಧಾರಿತ, ‘ಸಮಾನ ಗುಣಮಟ್ಟ’ದ ಶಿಕ್ಷಣ ನೀಡುವ ಅಂಶಗಳನ್ನು ಎನ್‌ಇಪಿ ಒಳಗೊಂಡಿದೆ. ಬಡವರ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಕೊಡಬಾರದೇ? ಸಮಾನ ಶಿಕ್ಷಣ ನೀಡಿದರೆ ತಮ್ಮ ಶಿಕ್ಷಣ ಸಂಸ್ಥೆಗಳಿಗೆ ಬಾಗಿಲು ಹಾಕಬೇಕಾಗಬಹುದು ಎಂಬ ಆತಂಕವೇ?

ರಾಜ್ಯ ಸರ್ಕಾರಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಎನ್ಇಪಿ ರೂಪಿಸಲಾಗಿದೆ ಎಂಬ ತಮ್ಮ ಹೇಳಿಕೆಯು ಅತ್ಯಂತ ಬೇಜವಾಬ್ದಾರಿಯುತ ಹಾಗೂ ರಾಜಕೀಯ ಪ್ರೇರಿತ ಹೇಳಿಕೆಯಾಗಿದೆ. ಅಸಲಿಗೆ ರಾಜ್ಯದ ಡಿಎಸ್‌ಇಆರ್‌ಟಿ, ಅನೇಕ ಶಿಕ್ಷಣ ತಜ್ಞರು, ಕುಲಪತಿಗಳು, ಪಾಲಕರು, ಮಕ್ಕಳ ವೈದ್ಯರು, ತಜ್ಞರಿಂದ ಅಭಿಪ್ರಾಯವನ್ನು ಸಂಗ್ರಹಿಸಿ ಸುದೀರ್ಘ ಸಮಾಲೋಚನೆ ನಡೆಸಿ ಎನ್‌ಇಪಿಯನ್ನು ರೂಪಿಸಲಾಗಿದೆ ಎಂಬುದನ್ನು ನಾನು ಸಾಬೀತುಪಡಿಸುತ್ತೇನೆ. ಸವಾಲು ಸ್ವೀಕರಿಸುವಿರಾ?

ವಿಜ್ಞಾನಿಗಳು, ಶಿಕ್ಷಣ ತಜ್ಞರು, ಮಕ್ಕಳ ತಜ್ಞರು, ಶಿಕ್ಷಕ ಸಮುದಾಯ ಹಾಗೂ ಸಾರ್ವಜನಿಕ ವಲಯದಲ್ಲಿ ಚರ್ಚಿಸಿ ಹತ್ತು ವರ್ಷ ಕಾಲ ಅಧ್ಯಯನ ನಡೆಸಿ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿ-2020 ರದ್ದುಗೊಳಿಸಲು ಕಾರಣವೇನು? ಅದರಲ್ಲಿರುವ ಲೋಪ – ದೋಷಗಳು ಏನು ಎಂಬುದನ್ನು ಅಧಿಕೃತ ದಾಖಲೆಗಳ ಮೂಲಕ ರಾಜ್ಯದ ಜನರಿಗೆ ತಿಳಿಸುವಿರಾ?

ಎನ್‌ಇಪಿಯಲ್ಲಿ ಆಯಾ ರಾಜ್ಯಗಳ ಭಾಷೆ/ ಮಾತೃ ಭಾಷೆಯಲ್ಲಿ ಶಿಕ್ಷಣಕ್ಕೆ ಒತ್ತು ನೀಡಲಾಗಿದೆ. ಉನ್ನತ ಶಿಕ್ಷಣದಲ್ಲೂ ಇಂಗ್ಲೀಷೇತರ ಭಾಷೆಯಲ್ಲಿ ಕಲಿತು ಪದವಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಎನ್‌ಇಪಿಯಲ್ಲಿ ಈ ರೀತಿ ವೈವಿಧ್ಯಮಯ ಕಲಿಕೆಗೆ ಅವಕಾಶ ಕಲ್ಪಿಸಿರುವುದರಿಂದ ತಮ್ಮ ಒಡೆತನದ ಶಿಕ್ಷಣ ಸಂಸ್ಥೆಗಳಲ್ಲಿ ನೀಡುತ್ತಿರುವ ಇಂಗ್ಲೀಷ್ ಶಿಕ್ಷಣಕ್ಕೆ ಧಕ್ಕೆಯಾಗುತ್ತದೆ ಎಂಬ ಭಯ ಕಾಡುತ್ತಿದೆಯೇ?

ಸಿಬಿಎಸ್ಇ ಶಾಲೆಗಳಲ್ಲಿ ಈಗಾಗಲೇ ಎನ್‌ಇಪಿ ಅನುಷ್ಠಾನವಾಗಿದೆ. ಹೀಗಾಗಿ, ಕಾಂಗ್ರೆಸ್ ನಾಯಕರು ಹಾಗೂ ಇನ್ನಿತರ ಬಲಾಢ್ಯ ರಾಜಕಾರಣಿಗಳ ಒಡೆತನದಲ್ಲಿರುವ ಸಿಬಿಎಸ್‌ಇ ಶಿಕ್ಷಣ ಸಂಸ್ಥೆಗಳಲ್ಲಿನ ಎನ್‌ಇಪಿ ಆಧಾರಿತ ಸಿಬಿಎಸ್‌ಇ ಪಠ್ಯಕ್ರಮದ ಬದಲು ಉದ್ದೇಶಿತ ರಾಜ್ಯ ಶಿಕ್ಷಣ ನೀತಿ ಪಠ್ಯಕ್ರಮವನ್ನು ಅಳವಡಿಸಿಕೊಳ್ಳಲಾಗುವುದೇ?

Leave A Reply

Your email address will not be published.