ಬೆಂಗಳೂರು : ಎಸ್ಎಸ್ ಎಲ್ ಸಿ ಪರೀಕ್ಷೆಯ ಉತ್ತರ ಪತ್ರಿಕೆಯ ಮೌಲ್ಯಮಾಪನ ಕಾರ್ಯ ಆರಂಭವಾಗಿದ್ದು, ಮೇ ತಿಂಗಳ ಮೊದಲ ವಾರದಲ್ಲೇ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ.!
ಮಾರ್ಚ್ 31 ರಿಂದ ಆರಂಭವಾಗಿದ್ದ ಎಸ್ಎಸ್ ಎಲ್ ಸಿ ಪರೀಕ್ಷೆಗಳು ಏಪ್ರಿಲ್ 15 ಕ್ಕೆ ಮುಕ್ತಾಯಗೊಂಡಿದ್ದವು. ರಾಜ್ಯಾದ್ಯಂತ 236 ಮೌಲ್ಯಮಾಪನ ಕೇಂದ್ರಗಳಲ್ಲಿ ಮೌಲ್ಯಮಾಪನ ಕಾರ್ಯ ಪ್ರಾರಂಭವಾಗಿದ್ದು, 8.6 ಲಕ್ಷ ವಿದ್ಯಾರ್ಥಿಗಳು ಬರೆದಿದ್ದು, ಅಂದಾಜು 45 ಲಕ್ಷ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡಬೇಕಿದೆ. ಮೌಲ್ಯಮಾಪನ ಕಾರ್ಯವನ್ನು ಮುಂದಿನ 10-11 ದಿನಗಳಲ್ಲಿ ಪೂರ್ಣಗೊಳಿಸುವ ಗುರಿ ಹೊಂದಿದ್ದು, ಮೇ. ಮೊದಲ ವಾರ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ ಯಂತೆ.!