ಬೆಂಗಳೂರು:ಪರಿಶಿಷ್ಟ ಜಾತಿ, ಪಂಗಡದವರಿಗೆ ಶೇ. 24.01 ಅನುದಾನ ಕಡ್ಡಾಯವಾಗಿ ವೆಚ್ಚ ಮಾಡುವುದನ್ನು ಖಾತ್ರಿಪಡಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ರಾಜ್ಯ ಹಣಕಾಸು ನಿಧಿ ಮುಕ್ತನಿಧಿ ಯೋಜನೆಯಡಿ ಕಲ್ಯಾಣ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಪರಿಶಿಷ್ಟ ಜಾತಿ, ಪಂಗಡದ ಜನರಿಗೆ ಶೇ. 24.01 ಅನುದಾನ ಕಡ್ಡಾಯವಾಗಿ ವೆಚ್ಚ ಮಾಡುವುದನ್ನುಖಾತ್ರಿಪಡಿಸಬೇಕು ಎಂದು ಆದೇಶ ನೀಡಿದ್ದಾರೆ.
ಅದೇ ರೀತಿ 15ನೇ ಹಣಕಾಸು ಆಯೋಗದಡಿ ಮಂಜೂರಾಗಿದ್ದ 33,803 ಕಾಮಗಾರಿಗಳ ಪೈಕಿ 23,714 ಪೂರ್ಣಗೊಂಡಿವೆ. ಬಿಡುಗಡೆಯಾಗಿದ್ದ 2,799 ಕೋಟಿ ರೂ. ಪೈಕಿ 1,883 ಕೋಟಿ ರೂ. ವೆಚ್ಚವಾಗಿದೆ. ಇನ್ನೂ 916 ಕೋಟಿ ರೂ.ಗಳ 10,089 ಕಾಮಗಾರಿ ಬಾಕಿಯಿದ್ದು, ಮುಂದಿನ ಎರಡು ವಾರದೊಳಗೆ ಟೆಂಡರ್ ಕರೆದು ನಿಗದಿತ ಅವಧಿಯೊಳಗೆ ಅನುದಾನ ಬಳಕೆ ಮಾಡಬೇಕು ಎಂದಿದ್ದಾರೆ.
ಮುಂದಿನ ತಿಂಗಳು ರಾಜ್ಯ ಮಟ್ಟದ ಜನಸ್ಪಂದನ ಕಾರ್ಯಕ್ರಮ ವನ್ನು ಕಲಬುರಗಿ ಜಿಲ್ಲೆಯಲ್ಲಿ ನಡೆಸುವು ದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾಧಿಕಾರಿ ಗಳ ಸಭೆಯಲ್ಲಿ ಪ್ರಕಟಿಸಿದ್ದಾರೆ. ಜನಸ್ಪಂದನ ಕಾರ್ಯ ಕ್ರಮವನ್ನು ಎಲ್ಲ ಜಿಲ್ಲೆಗಳಲ್ಲಿ ಆರಂಭಿಸಬೇಕು. ಅಧಿವೇಶನ ಮುಗಿದ ಬಳಿಕ ಜಿಲ್ಲಾ ಜನಸ್ಪಂದನ ಕಾರ್ಯಕ್ರಮವನ್ನು ನಡೆಸಬೇಕು. ಜಿಲ್ಲಾ ಉಸ್ತುವಾರಿ ಸಚಿವರು ತಪ್ಪದೇ ಜನಸ್ಪಂದನ ಸಭೆಗಳನ್ನು ಮಾಡಬೇಕು. ಜಿಲ್ಲಾಧಿಕಾರಿಗಳು ಸ್ವೀ ಕರಿಸುವ ಅರ್ಜಿಗಳನ್ನು ಆದಷ್ಟು ಬೇಗನೆ ವಿಲೇ
ಮಾಡಬೇಕು ಎಂದು ಸೂಚನೆ ನೀಡಿದರು.