Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

ಎಸ್.ಸಿ -ಎಸ್.ಟಿ ವಿದ್ಯಾರ್ಥಿಗಳ ಲ್ಯಾಪ್ ಟಾಪ್ ಗೆ 230 ಕೋಟಿ ಒದಗಿಸಲು ಸಿಎಂ ಸೂಚನೆ

0

ಬೆಂಗಳೂರು: ವಿಶ್ವವಿದ್ಯಾಲಯಗಳ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್‌ ಟಾಪ್‌ ಅನ್ನು ಎಸ್‌.ಪಿ.ಎಸ್.ಪಿ. / ಟಿ.ಎಸ್.ಪಿ. ಅಡಿ ವಿತರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವ ವಿಶ್ವ ವಿದ್ಯಾಲಯಗಳ ಕುಲಪತಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಯಿತು

ಲ್ಯಾಪ್ ಟಾಪ್ ವಿತರಿಸುವ ಸಂಬಂಧ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ. ಅಡಿ 230 ಕೋಟಿ ರೂ. ಒದಗಿಸುವಂತೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಅವರಿಗೆ ಸಭೆ ನಡೆಯುವಾಗಲೇ ದೂರವಾಣಿ ಮೂಲಕ ಸೂಚನೆ ನೀಡಿದರು.

ವಿವಿಗಳಲ್ಲಿರುವ ಎಲ್ಲಾ ಸಮುದಾಯಗಳ ಪ್ರತಿ ವಿದ್ಯಾರ್ಥಿಗಳಿಗೂ ಲ್ಯಾಪ್ ಟಾಪ್ ವಿತರಿಸಬೇಕಿದೆ. ಮುಂದಿನ ದಿನಗಳಲ್ಲಿ ಇದಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯು ಕೈಗಾರಿಕೋದ್ಯಮಗಳ ಬೇಡಿಕೆಗೆ ಅನುಗುಣವಾದ ಪಠ್ಯಕ್ರಮ ರೂಪಿಸಿ, ಎಂಜಿನಿಯರಿಂಗ್‌ ಪದವೀಧರರಿಗೆ ಹೆಚ್ಚಿನ ಉದ್ಯೋಗಾವಕಾಶ ಒದಗಿಸಲು ಅನುವಾಗುವಂತಹ ಶಿಕ್ಷಣಕ್ಕೆ ಒತ್ತು ನೀಡಬೇಕೆಂದು ಮುಖ್ಯಮಂತ್ರಿಗಳು ಸೂಚಿಸಿದರು.

Leave A Reply

Your email address will not be published.