ಒಡಿಶಾ: ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ 288ಕ್ಕೂ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದು, 900ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ರೈಲು ಅಪಘಾತದಲ್ಲಿ ಪೋಷಕರನ್ನು ಕಳೆದುಕೊಂಡಿರುವ ಮಕ್ಕಳಿಗೆ ಉಚಿತ ಶಾಲಾ ಶಿಕ್ಷಣ ನೀಡುವುದಾಗಿ ಅದಾನಿ ಸಮೂಹ ತಿಳಿಸಿದೆ.
ಶಕ್ತಿ, ಸರಕುಗಳು, ವಿಮಾನ ನಿಲ್ದಾಣಗಳು ಮತ್ತು ಡೇಟಾ ಸೆಂಟರ್‌ಗಳಿಗೆ ಬಂದರುಗಳ ವ್ಯವಹಾರವನ್ನು ಹೊಂದಿರುವ ಅದಾನಿ ಸಮೂಹ ಸಂಸ್ಥೆಗಳ ಮುಖ್ಯಸ್ಥ ಗೌತಮ್ ಅದಾನಿ ಟ್ವೀಟ್ ಮಾಡಿದ್ದು, ಸಂತ್ರಸ್ತರನ್ನು ಮತ್ತು ಅವರ ಕುಟುಂಬಗಳನ್ನು ಬೆಂಬಲಿಸುವುದು ಮತ್ತು ಮಕ್ಕಳಿಗೆ ಉತ್ತಮ ನಾಳೆಯನ್ನು ನೀಡುವುದು ಎಲ್ಲರ ಜಂಟಿ ಜವಾಬ್ದಾರಿಯಾಗಿದೆ ಎಂದು ಹೇಳಿದ್ದಾರೆ.
ಬಾಲಿವುಡ್ ಹಾಗೂ ಮರಾಠಿ ಚಿತ್ರರಂಗದ ಹೆಸರಾಂತ ನಟಿ ಸುಲೋಚನಾ ಲಾತ್ಕರ್ ವಿಧಿವಶ
“ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತದಿಂದ ನಾವೆಲ್ಲರೂ ತೀವ್ರವಾಗಿ ವಿಚಲಿತರಾಗಿದ್ದೇವೆ. ಈ ಅಪಘಾತದಲ್ಲಿ ತಮ್ಮ ಪೋಷಕರನ್ನು ಕಳೆದುಕೊಂಡ ಮಕ್ಕಳ ಶಾಲಾ ಶಿಕ್ಷಣವನ್ನು ಅದಾನಿ ಗ್ರೂಪ್ ನೋಡಿಕೊಳ್ಳಲು ನಿರ್ಧರಿಸಿದೆ. ಸಂತ್ರಸ್ತರು ಮತ್ತು ಅವರ ಕುಟುಂಬಗಳು ಮತ್ತು ಮಕ್ಕಳಿಗೆ ಉತ್ತಮ ನಾಳೆಯನ್ನು ನೀಡಿ, ಅವರಿಗೆ ಬೆಂಬಲ ನೀಡುವುದು ನಮ್ಮೆಲ್ಲರ ಜಂಟಿ ಜವಾಬ್ದಾರಿಯಾಗಿದೆ.” ಎಂದು ಅವರು ಟ್ವೀಟ್ ಮಾಡಿದ್ದಾರೆ.
ಮೂರು ದಶಕಗಳಲ್ಲಿ ಭೀಕರ ದುರಂತ ಮೂರು ದಶಕಗಳಲ್ಲಿ ಸಂಭವಿಸಿದ ಅತ್ಯಂತ ಭೀಕರ ರೈಲು ಅಪಘಾತ ಇದಾಗಿದೆ. ರೈಲು ದುರಂತಕ್ಕೆ ಇಡೀ ದೇಶವೆ ಕಂಬನಿ ಮಿಡಿದಿದೆ. ರೈಲು ಅಪಘಾತದಲ್ಲಿ ಗಾಯಗೊಂಡವರ ಚಿಕಿತ್ಸೆಗೆ ನೆರವಾಗಲು ನೂರಾರು ಮಂದಿ ಸಾಲಿನಲ್ಲಿ ನಿಂತು ರಕ್ತದಾನ ಮಾಡಿದ್ದನ್ನು ನಾವು ಗಮನಿಸಿದ್ದೇವೆ. ನೂರಾರು ಮಂದಿ ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯದಲ್ಲಿ ಕೈಜೋಡಿಸಿದ್ದರು. ಸರ್ಕಾರ ಕೂಡ ದುರಂತದಲ್ಲಿ ಸತ್ತವರ ಕುಟುಂಬಗಳಿಗೆ ತಲಾ 10 ಲಕ್ಷ ರುಪಾಯಿ ನೀಡುವುದಾಗಿ ಘೋಷಿಸಿದೆ. ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರುಪಾಯಿ ಪರಿಹಾರ ಘೋಷಿಸಿದೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಕಾರ್ಯದಲ್ಲಿ ಭಾಗವಹಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಕೂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದರು. ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರನ್ನು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದ್ದರು.