ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಒಳನುಸುಳುವಿಕೆಗೆ ಯತ್ನಿಸಿದ ಓರ್ವ ಉಗ್ರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾನುವಾರ ರಾತ್ರಿ ಕೇರನ್ ಸೆಕ್ಟರ್ನ ಜುಮಗುಂಡ್ ಪ್ರದೇಶದಲ್ಲಿ ಒಳನುಸುಳುವಿಕೆ ಪ್ರಯತ್ನವನ್ನು ಭದ್ರತಾ ಪಡೆಗಳು ವಿಫಲಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಸೋಮವಾರ ಬೆಳಗ್ಗೆ ಪ್ರದೇಶದಲ್ಲಿ ಶೋಧ ನಡೆಸಿದಾಗ ಭಯೋತ್ಪಾದಕನ ಮೃತದೇಹ ಪತ್ತೆಯಾಗಿದ್ದು, ಕಾರ್ಯಚರಣೆ ಮುಂದುವರಿದಿದೆ.


































