ಕಟೀಲು : ಚಲಿಸುತ್ತಿದ್ದ ಬಸ್ ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ಕಟೀಲು ದೇವಸ್ಥಾನದ ಮುಂಭಾಗದಲ್ಲಿ ನಡೆದಿದ್ದು, ಘಟನೆಯಲ್ಲಿ ಪ್ರಯಾಣಿಕರು ಹಾಗೂ ಬಸ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ.
ಇಂದು ಮಧ್ಯಾಹ್ನ 2.30 ರ ಸುಮಾರಿಗೆ ಗೋಲ್ಡನ್ ಟ್ರಾವೆಲ್ಸ್ ಎಂಬ ಹೆಸರಿನ ಬಸ್ ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ದೇವಸ್ಥಾನದ ಮುಂಭಾಗವೇ ಬೆಂಕಿ ಹೊತ್ತಿಕೊಂಡಿದ್ದು, ಈ ವೇಳೆ ಬಸ್ ನಲ್ಲಿ ಇಬ್ಬರ ಮಹಿಳೆಯರು ಮತ್ತು ಬಸ್ ಚಾಲಕ ಇದ್ದರು ಎಂದು ಹೇಳಲಾಗಿದ್ದು, ಮೂವರು ಬಸ್ ನಿಂದ ಇಳಿದ ಕಾರಣ ಅಪಾಯದಿಂದ ಪಾರಾಗಿದ್ದಾರೆ.
ಚಿತ್ರದುರ್ಗದಲ್ಲಿ ಮೇ.20ರಂದು ನೇರ ನೇಮಕಾತಿ ಸಂದರ್ಶನ: ಇಲ್ಲಿದೆ ಸಂಪೂರ್ಣ ವಿವರ
ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಈ ವೇಳೆ ಸ್ಥಳದಲ್ಲಿದ್ದ ನೀರು ಸರಬರಾಜ ಮಾಡುವ ಟ್ಯಾಂಕರ್ ಇದ್ದ ಕಾರಣ ಕೂಡಲೇ ಬೆಂಕಿಯನ್ನು ನಂದಿಸಲಾಗಿದೆ. ಕೂಡಲೇ ಬೆಂಕಿ ನಂದಿಸಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ.