ಕರ್ನಾಟಕಕ್ಕೆ ಯೋಗಿಯಂತಹ ಮುಖ್ಯಮಂತ್ರಿ ಬೇಕಿದೆ: ನೇಹಾ ಹಿರೇಮಠ್ ತಂದೆ ಹೇಳಿಕೆ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಳೆದ ತಿಂಗಳು ನೇಹಾ ಪಾಟೀಲ್ ಕೊಲೆ ಕೇಸ್ ಮಾಸುವ ಮುನ್ನವೇ ಅದೇ ಮಾದರಿಯಲ್ಲಿ ಹುಬ್ಬಳ್ಳಿಯಲ್ಲಿ ಮತ್ತೊಂದು ಯುವತಿಯ ಹತ್ಯೆಯಾಗಿದೆ. ಈ ವಿಚಾರವಾಗಿ ವೀರಾಪೂರ ಓಣಿಯ ಕಾಂಗ್ರೆಸ್ ಕಾರ್ಪೊರೇಟರ್‌ ಹಾಗೂ ನೇಹಾ ಹಿರೇಮಠ್ ತಂದೆ ನಿರಂಜನ ಹಿರೇಮಠ ಹುಬ್ಬಳ್ಳಿ ಪೊಲೀಸರು ಹಾಗೂ ರಾಜ್ಯ ಸರ್ಕಾರದ ಮೇಲೆ ಕಿಡಿಕಾರಿದ್ದಾರೆ.

ನನ್ನ ವಾರ್ಡ್‌ನಲ್ಲಿ ಇಂತಹ ಘಟನೆಯಾಗಿರುವುದನ್ನ ನಾನು ಖಂಡಿಸುತ್ತೇನೆ. ನನ್ನ ಪುತ್ರಿಯ ನೇಹಾ ಹತ್ಯೆ ನಡೆದು ಇನ್ನೂ ಒಂದು ತಿಂಗಳು ಕಳೆದಿಲ್ಲ. ಈ ರೀತಿ ಘಟನೆ ಮತ್ತೆ ಮರುಕಳಿಸಿದೆ. ನನ್ನ ಪುತ್ರಿ ಹತ್ಯೆಯಾದಾಗಲೇ ಈ ರೀತಿಯ ಮತ್ತೊಂದು ಘಟನೆಯಾಗಬಾರದು ಅಂತ ಹೇಳಿದ್ದೆ. ಆದರೂ ಇಂತಹ ಘಟನೆ ನಡೆದಿದೆ ಇದಕ್ಕೆ ಇಲ್ಲಿನ ಪೊಲೀಸ್ ಕಮೀಷನರ್ ಅವರೇ ಕಾರಣ. ಹುಬ್ಬಳ್ಳಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಎಲ್ಲಾ ಕಡೆ ಯುವಕರು ಡ್ರಗ್ಸ್ ಹಾವಳಿಗೆ ದಾರಿ ತಪ್ಪುತ್ತಿದ್ದಾರೆ. ಹುಬ್ಬಳ್ಳಿ ಪೊಲೀಸರು ಇದರ ಬಗ್ಗೆ ಗಮನ ಹರಿಸುತ್ತಿಲ್ಲ. ಕರ್ನಾಟಕಕ್ಕೂ ಉತ್ತರಪ್ರದೇಶ, ಹೈದರಾಬಾದ್‌ ಮಾದರಿಯಲ್ಲೇ ಎನ್‌ಕೌಂಟರ್‌ ಆಗಬೇಕು. ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರಂತಹ ಸಿಎಂ ನಮ್ಮ ರಾಜ್ಯಕ್ಕೂ ಬೇಕಿದೆ ಎಂದು ಹೇಳಿದ್ದಾರೆ.

ಇಲ್ಲಿನ ಪೊಲೀಸ್ ಆಯುಕ್ತರು ಸರಿಯಾದ ಯಾವ ಕ್ರಮವನು ಕೈಗೊಳ್ಳುತ್ತಿಲ್ಲ. ಸರಿಯಾಗಿ ಕೆಲಸ ಮಾಡಲು ಇಷ್ಟ ಇಲ್ಲದಿದ್ದರೇ ರಾಜೀನಾಮೆ ಕೊಟ್ಟು ಹೋಗಲಿ. ಅಂಜಲಿ ಕೂಡ ನನ್ನ ಮಗಳಿದ್ದಂತೆ. ನನ್ನ ಪುತ್ರಿ ನೇಹಾಳ ಹತ್ಯೆ ವಿಚಾರವಾಗಿ ಯಾವ ರೀತಿ ಹೋರಾಟ ನಡೆದಿತ್ತು ಅದೇ ರೀತಿ ಇವಳ ಹತ್ಯೆಯನ್ನ ಖಂಡಿಸಬೇಕು ಎಂದು ನಿರಂಜನ ಹಿರೇಮಠ ಹೇಳಿದ್ದಾರೆ.

Advertisement

ಹುಬ್ಬಳ್ಳಿಯ ದಾಜಿಬಾನಪೇಟೆ ಸಮೀಪದ ವೀರಾಪುರ ಓಣಿಯಲ್ಲಿ ಬುಧವಾರ ಬೆಳಗ್ಗೆ 20 ವರ್ಷದ ಯುವತಿಯನ್ನು 22 ವರ್ಷದ ಯುವಕನೊಬ್ಬ ಕೊಲೆ ಮಾಡಿದ್ದಾನೆ. ಆರೋಪಿ ವಿಶ್ವನಾಥ್ ಬಳಿಕ ಪರಾರಿಯಾಗಿದ್ದ.

Add a comment

Leave a Reply

Your email address will not be published. Required fields are marked *

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement