Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

0

 

ಬೆಂಗಳೂರು:  ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2021-24ನೇ ಸಾಲಿನಲ್ಲಿ ವಿವಿಧ ಯೋಜನೆಯಡಿ ಸಾಲ, ಸಹಾಯಧನ ಸೌಲಭ್ಯಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು kacdc.karnataka.gov.in   ವೆಬ್‌ಸೈಟ್ ಮೂಲಕ ಅಗತ್ಯ ದಾಖಲೆಗಳೊಂದಿಗೆ 2023ರ ಸೆಪ್ಟೆಂಬರ್ 18 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅರ್ಹತೆಗಳು: ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದವರಾಗಿರಬೇಕು. ನಮೂನೆ-ಜಿ ಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು. ಆರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು. ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಆರ್ಜಿದಾರರು ಆಧಾರ್‌ಗೆ ಆರ್ಜಿದಾರರ ಮೊಬೈಲ್ ನಂಬರ್ ಜೋಡಣೆ ಮಾಡಿರಬೇಕು. ಆರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆರು ಸೀಡ್ ಮಾಡಿಸಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.3,00,000 ಗಳಮಿತಿಯ ಒಳಗಿರಬೇಕು. ಅರ್ಜಿದಾರರು 18 ವರ್ಷ ಮೇಲ್ಪಟ್ಟು 45 ವರ್ಷದ ಒಳಗಿನವರಾಗಿರಬೇಕು.

ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. ಈಗಾಗಲೇ ಬೇರೆಯಾವುದೇ ನಿಗಮಗಳ ಯೋಜನೆಗಳಲ್ಲಿ ಅಥವಾ ಈ ನಿಗಮದಲ್ಲೇ ಈ ಹಿಂದೆ ಸಾಲ ಪಡೆದಿದ್ದಲ್ಲಿ ಅಂತಹ ಆಭ್ಯರ್ಥಿಗಳು ಹಾಗೂ ಅವರ ಕುಟುಂಬದವರಿಗೆ ಸಾಲ ಸೌಲಭ್ಯ ಪಡೆಯಲು ಅರ್ಹವಿರುವುದಿಲ್ಲ, ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ (ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಮಾತ್ರ ಇಬ್ಬರಿಗೆ ಅವಕಾಶವಿರುತ್ತದೆ). ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33% ವಿಕಲಚೇತನವರಿಗೆ ಶೇ.5% ಹಾಗೂ ತೃತೀಯ ಲಿಂಗಿಗಳಿಗೆ ಶೇ.5% ರಷ್ಟು ಮೀಸಲಾತಿ ಇರಿಸಿದೆ.

 

ಸ್ವಯಂ ಉದ್ಯೋಗ ನೇರಸಾಲ: ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ, ಅರ್ಜಿದಾರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ. 3,00,000ಗಳ ಮಿತಿಯೊಳಗಿರಬೇಕು.

ಈ ಯೋಜನೆಯಲ್ಲಿ ಸಣ್ಣ ವ್ಯಾಪಾರ, ಸ್ವಯಂ ಉದ್ಯೋಗ ಇತ್ಯಾದಿ ವ್ಯಾಪಾರ ಚಟುವಟಿಕೆಗಳಿಗೆ ಕನಿಷ್ಠ ರೂ.50,000ಗಳಿಂದ ಗರಿಷ್ಟ 1,00,000ಗಳ ಸಾಲ ಒದಗಿಸಲಾಗುವುದು, ಈ ಮೊತ್ತದಲ್ಲಿ ಶೇ.20ರಷ್ಟು ಸಹಾಯಧನ ಹಾಗೂ ಶೇ.80ರಷ್ಟು ಸಾಲವನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು. 2 ತಿಂಗಳ ವಿರಾಮ ಅವಧಿ ಇರುತ್ತದೆ. ನಂತರ ಸಾಲವನ್ನು 34 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು.

ಆಹಾರ ವಾಹಿನಿ ಯೋಜನೆ: ಆರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ. 6,00,000 ಮಿತಿಯೊಳಗಿರಬೇಕು. ಅರ್ಜಿದಾರರು 21 ವರ್ಷ ಮೇಲ್ಪಟ್ಟು 55 ವರ್ಷದ ಒಳಗಿನವರಾಗಿರಬೇಕು. ಆಹಾರ ವಾಹಿನಿ ಪ್ರಾರಂಭಿಸಲು ಬ್ಯಾಂಕ್, ಸಹಕಾರಿ ಸಂಘಗಳಿAದ ಸಾಲ ಪಡೆಯಬೇಕು ಹಾಗೂ ನಿಗಮದಿಂದ ಗರಿಷ್ಠ ರೂ.2,00,000ಗಳ ಸಹಾಯಧನ ನೀಡಲಾಗುವುದು.

ವಾಸವಿ ಜಲಶಕ್ತಿ ಯೋಜನೆ: ವಾಸವಿ ಜಲಶಕ್ತಿ ಯೋಜನೆಯಡಿ 2 ರಿಂದ 5 ಎಕರೆ ಕೃಷಿ ಭೂಮಿ ಹೊಂದಿರವವರಿಗೆ ನೀರಾವರಿ ಸೌಲಭ್ಯವನ್ನು ಒದಗಿಸಲು ಸಾಲ, ಸಹಾಯಧನವನ್ನು ನೀಡಲಾಗುವುದು. ಆರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ. 6,00,000 ಗಳ ಮಿತಿಯೊಳಗಿರಬೇಕು. ಅರ್ಜಿದಾರರು 21 ವರ್ಷ ಮೇಲ್ಪಟ್ಟು 50 ವರ್ಷದ ಒಳಗಿನವರಾಗಿರಬೇಕು. ಈ ಯೋಜನೆಯಡಿ ಗರಿಷ್ಠ ರೂ. 2,00,000 ಗಳ ಸಾಲವನ್ನ ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಒದಗಿಸಲಾಗುವುದು. ವಿದ್ಯುದ್ದೀಕರಣಕ್ಕಾಗಿ ರೂ.50,000 ಗಳ ಸಹಾಯಧನ ನೀಡಲಾಗುವುದು. ಸಾಲವನ್ನು ಮರುಪಾವತಿಸಲು 6 ತಿಂಗಳ ವಿರಾಮಾವಧಿ ಇರುತ್ತದೆ ನಂತರ ಸಾಲವನ್ನು 34 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು.

ಅರಿವು ಶೈಕ್ಷಣಿಕ ಸಾಲ: ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಇಂಜಿನಿಯರಿAಗ್, ವೈದ್ಯಕೀಯ, ದಂತ ವೈದ್ಯಕೀಯ ಇತ್ಯಾದಿ ವೃತ್ತಿಪರ ಪದವಿ ಹಾಗೂ ಸ್ನಾತಕೋತ್ತರ ಪದವಿಗಳಲ್ಲಿ ಸಿಇಟಿ, ಎನ್‌ಇಇಟಿ ಮೂಲಕ ಆಯ್ಕೆಯಾಗಿ ಮತ್ತು ವೃತ್ತಿಪರ ಪಿ.ಹೆಚ್.ಡಿ. ಕೋರ್ಸ್ನಲ್ಲಿ ವ್ಯಾಸಂಗ ಮಾಡುವವರಿಗೆ, ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ವಾರ್ಷಿಕ ರೂ.1,00,000 ಗಳ ಸಾಲವನ್ನು ಶೇ.2ರ ಬಡ್ಡಿದರದಲ್ಲಿ ನೀಡಲಾಗುವುದು, ವ್ಯಾಸಂಗ ಪೂರ್ಣಗೊಂಡ ನಂತರ 4 ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು.

ಅರ್ಜಿದಾರರ ಕುಟುಂಬ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6,00,000 ಗಳ ಮಿತಿಯೊಳಗಿರಬೇಕು. ಅರ್ಜಿದಾರರು 18 ವರ್ಷ ಮೇಲ್ಪಟ್ಟು 35 ವರ್ಷದ ಒಳಗಿರಬೇಕು. ಪ್ರಾಂಶುಪಾಲರಿAದ ದೃಢೀಕರಿಸಿದ ಪ್ರಸ್ತುತ ವರ್ಷದ ವ್ಯಾಸಂಗ ಪ್ರಮಾಣ ಪತ್ರ ಮತ್ತು ನಿಗಧಿತ ಶುಲ್ಕ ನಮೂನೆ ಪತ್ರ ಹೊಂದಿರಬೇಕು

Leave A Reply

Your email address will not be published.