Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

ಕರ್ನಾಟಕ ಬಂದ್ – 60ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು

0

ಬೆಂಗಳೂರು: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿರುವುದನ್ನು ಖಂಡಿಸಿ ಇಂದು ಕನ್ನಡ ಪರ ಸಂಘಟನೆಗಳು ಮತ್ತು ವಿವಿಧ ರಾಜಕೀಯ ಪಕ್ಷಗಳು ಕರ್ನಾಟಕ ಬಂದ್​ಗೆ ಕರೆ ನೀಡಿರುವ ಹಿನ್ನಲೆಯಲ್ಲಿ ವಿಮಾನ ಹಾರಾಟಗಳಲ್ಲಿ ವ್ಯತ್ಯಯ ಉಂಟಾಗಿದೆ.

ಗುರುವರ ಮಧ್ಯರಾತ್ರಿಯಿಂದ ಇಂದು ಮಧ್ಯರಾತ್ರಿ 12 ಗಂಟೆಯವರೆಗೆ 60ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದಾಗಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದಿಂದ ತೆರಳುವ 44 ವಿಮಾನಗಳು ರದ್ದಾಗಿದ್ದು, ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸುವ 16 ವಿಮಾನಗಳ ಹಾರಾಟ ರದ್ದು ಮಾಡಲಾಗಿದೆ.

ಇನ್ನು ಬಂದ್ ಇಂದು ಬೆಳಗ್ಗೆ 6 ಗಂಟೆಯಿಂದ ಪ್ರಾರಂಭವಾಗಿದ್ದು, ಸಂಜೆ 6 ಗಂಟೆಯವರೆಗೂ ನಡೆಯಲಿದೆ. ಬಂದ್ ಗೆ ರಾಜ್ಯದೆಲ್ಲೆಡೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

Leave A Reply

Your email address will not be published.