ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶಕ್ಕೆ ಕೆಲ ಗಂಟೆಗಳು ಮಾತ್ರ ಬಾಕಿ ಉಳಿದಿದೆ. ಈ ನಡುವೆ ಕರ್ನಾಟಕ ವಿಧಾನಸಭೆ ಚುನಾವಣೆಯು ರಾಷ್ಟ್ರದಾದ್ಯಂತ ಭಾರೀ ಕುತೂಹಲ ಕೆರಳಿಸಿದೆ. ರಾಜ್ಯದಲ್ಲಿ ಮತ್ತೆ ಅತಂತ್ರ ಸ್ಥಿತಿ ಎದುರಾಗಬಹುದು ಎಂದು ಬಹುತೇಕ ಚುನಾವಣಾಪೂರ್ವ ಸಮೀಕ್ಷೆಗಳು ಅಭಿಪ್ರಾಯಪಟ್ಟಿವೆ. ಅದರಂತೆ ಸದ್ಯದ ಫಲಿತಾಂಶವನ್ನ ನೋಡಿದ್ರೆ ಅತಂತ್ರ ಫಲಿತಾಂಶ ಪ್ರಕಟವಾಗಲಿದ್ಯಾ ಎಂಬ ಪ್ರಶ್ನೆ ಉದ್ಭವವಾಗಿದೆ.
ಎರಡೂ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್‌ಗೆ ಸಂಪೂರ್ಣ ಬಹುಮತ ಸಿಗುವುದು ಅನಿಶ್ಚಿತವಾಗಿದೆ. ಈ ಹಿನ್ನೆಲೆಯಲ್ಲಿ, ಪ್ರತಿ ಬಾರಿಯಂತೆ ಈ ಬಾರಿಯೂ ಎಲ್ಲರ ಗಮನ ಜೆಡಿಎಸ್ ಪಕ್ಷದ ಕಡೆಗೆ ತಿರುಗಿದೆ. 2004, 2008 ಮತ್ತು 2018 ರಂತೆಯೇ 2023 ರ ಕರ್ನಾಟಕ ಚುನಾವಣೆಯು ಫಲಿತಾಂಶ ಅತಂತ್ರವಾಗಲಿದೆ ಎಂಬ ಮುನ್ಸೂಚನೆಯನ್ನು ಸಮೀಕ್ಷೆಗಳು ನೀಡಿವೆ. ಸಮೀಕ್ಷೆಗಳಂತೆ ಈ ಬಾರೀಯೂ ಅತಂತ್ರ ಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ. ಈಗಾಗಲೇ ಕಾಂಗ್ರೆಸ್ ಕೆಲ ಕ್ಷೇತ್ರಗಳಲ್ಲಿ ಮುನ್ನಡೆಯನ್ನ ಸಾಧಿಸಿದರು ಸಹ ಬಿಜೆಪಿ ಬಹುತೇಕ ಕ್ಷೇತ್ರದಲ್ಲಿ ಹಿನ್ನಡೆಯನ್ನ ಸಾಧಿಸಿದೆ. ಇನ್ನೂ ಪ್ರಾದೇಶಿಕ ಪಕ್ಷ ಜೆಡಿಎಸ್ ನಲ್ಲೂ ಕೆಲ ಕ್ಷೇತ್ರದಲ್ಲಿ ಮಾತ್ರ ಬಾಕಿ ಉಳಿದಿದ್ದು, ಸದ್ಯದ ಫಲಿತಾಂಶವನ್ನ ನೋಡಿದ್ರೆ ಈ ಬಾರಿಯೂ ಅತಂತ್ರ ಫಲಿತಾಂಶ ಬರಲಿದೆ ಎಂದು ಹೇಳಲಾಗುತ್ತಿದೆ.
ಈಗಾಗಲೇ ಘಟಾನುಘಟಿ ನಾಯಕರು ಮೊದಲು ಹಾಗೂ ಎರಡನೇ ಸುತ್ತಿನಲ್ಲಿ ಹಿನ್ನಡೆಯನ್ನ ಸಾಧಿಸಿದ್ದು, ಸದ್ಯದ ಮಾಹಿತಿ ಪ್ರಕಾರ ಆಡಳಿತರೂಢ ಬಿಜೆಪಿಗೆ 80 ಕ್ಷೇತ್ರದಲ್ಲಿ ಮುನ್ನಡೆಯನ್ನ ಸಾಧಿಸಿದ್ರೆ, ಕಾಂಗ್ರೆಸ್ 99 ಕ್ಷೇತ್ರಗಳಲ್ಲಿ ಮುಂದಿದೆ. ಇನ್ನೂ ಜೆಡಿಎಸ್ 28 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ರೆ, ಪಕ್ಷೇತರ ಅಭ್ಯರ್ಥಿಗಳು 5 ಕ್ಷೇತ್ರದಲ್ಲಿ ಮುನ್ನಡೆಯನ್ನ ಸಾಧಿಸಿದ್ದಾರೆ.