ದಾವಣಗೆರೆ; ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ 14 ಕಲ್ಯಾಣ ಸಂಘಟಿಕರು ‘ಸಿ’ ವೃಂದದ ಹುದ್ದೆಗಳ ನೇಮಕಾತಿಗಾಗಿ ಸೇವಾ ನಿವೃತ್ತಿ ಹೊಂದಿರುವ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಭೂಸೇನೆಯ ಜೆ.ಸಿ.ಓ ರ್ಯಾಂಕ್ ಹಾಗೂ ವಾಯುಪಡೆ ಮತ್ತು ನೌಕಾಪಡೆಯ ತತ್ಸಮಾನವಾದ ರ್ಯಾಂಕ್‍ನಿಂದ ಸೇವಾ ನಿವೃತ್ತಿ ಹೊಂದಿರುವ ಮಾಜಿ ಸೈನಿಕರು ಹುದ್ದೆಗೆ ಅರ್ಹರಾಗಿದ್ದು, 20 ದಿನಗಳೊಳಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬೆಂಗಳೂರು ದೂ. ಸಂ: 080-25589459 ಸಂಪರ್ಕಿಸಲು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಉಪ ನಿರ್ದೇಶಕರಾದ ಡಾ. ಸಿ.ಎ ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.