Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

‘ಕಾಂಗ್ರೆಸ್ ಗ್ಯಾರಂಟಿಗಳ ಹೆಸರಿನಲ್ಲಿ ಜನರಿಗೆ ದೋಖಾ ಮಾಡಿದೆ’ – ಬೊಮ್ಮಾಯಿ ವಾಗ್ದಾಳಿ

0

ಬೆಂಗಳೂರು: ಕೇಂದ್ರ ಸರ್ಕಾರ ನೀಡುವ ಅಕ್ಕಿಯಲ್ಲೂ ಕರ್ನಾಟಕದ ಕಾಂಗ್ರೆಸ್ ಸರ್ಕಾರ 2 ಕೆಜಿ ಅಕ್ಕಿಯನ್ನು ಕಡಿತಗೊಳಿಸಿದ್ದು, ಕಾಂಗ್ರೆಸ್ ಗ್ಯಾರಂಟಿಗಳ ಹೆಸರಿನಲ್ಲಿ ಜನರಿಗೆ ದೋಖಾ ಮಾಡಿದೆ ಎಂದು ಮಾಜಿ ಸಿಎಂ ಬೊಮ್ಮಾಯಿ ಆರೋಪಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನ್ನಭಾಗ್ಯ ಯೋಜನೆಯಲ್ಲಿ ಅಕ್ಕಿ ಕಡಿತ ಮಾಡಲಾಗಿದ್ದು, ಇದು ಅನ್ನಭಾಗ್ಯ ಯೋಜನೆಯಲ್ಲ, ಕನ್ನ ಭಾಗ್ಯ ಎಂದು ವಾಗ್ದಾಳಿ ನಡೆಸಿದ್ದಾರೆ.

ಇನ್ನು ಕುಮಾರಸ್ವಾಮಿಯವರು ವರ್ಗಾವಣೆ ವಿಚಾರವಾಗಿ ರೇಟ್ ಫಿಕ್ಸ್ ದಾಖಲೆ ಕೊಟ್ಟಿದ್ದಾರೆ. ಅದಕ್ಕೂ ಮುಂಚೆಯೇ ನಾನು ಈ ವಿಚಾರ ಪ್ರಸ್ತಾಪಿಸಿದ್ದೆ. ಈಗ ಒಂದು ಇಲಾಖೆಯ ದರ ಪಟ್ಟಿಯನ್ನೇ ಕೊಟ್ಟಿದ್ದಾರೆ. ಈ ಬಗ್ಗೆ ಸರ್ಕಾರ ಸ್ಪಷ್ಟನೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

Leave A Reply

Your email address will not be published.