ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, 135 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡು ಅಧಿಕಾರ ಹಿಡಿಯುವ ಉಮೇದಿನಲ್ಲಿದೆ. ಆದರೆ ಪಕ್ಷದ ನೂತನ ಮುಖ್ಯಮಂತ್ರಿ ಯಾರು ಎಂದು ಈಗ ಪಕ್ಷ ಹೆಸರು ತಿಳಿಸಬೇಕಿದೆ. ಈಗಾಗಲೇ ತಿಳಿದಿರುವಂತೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ಈಗ ಮತ್ತೆ ಮುನ್ನೆಲೆಗೆ ಬಂದಿದ್ದಾರೆ.
ದ್ವೇಷದ ಮಾರುಕಟ್ಟೆ ಮುಚ್ಚಿದೆ, ಪ್ರೀತಿಯ ಅಂಗಡಿಗಳು ತೆರೆದಿವೆ : ರಾಹುಲ್ ಗಾಂಧಿ
ತನ್ನ ಮುಖ್ಯಮಂತ್ರಿಯನ್ನು ನಿರ್ಧರಿಸುವ ಕಠಿಣ ಕೆಲಸವನ್ನು ಎದುರಿಸುತ್ತಿರುವ ಕಾಂಗ್ರೆಸ್‌ಗೆ ನಿಜವಾದ ಯುದ್ಧವು ಈಗ ಪ್ರಾರಂಭವಾಗುತ್ತಿದೆ. ಇಲ್ಲಿಯವರೆಗೆ ತಣ್ಭಗಿದ್ದ ಇಬ್ಬರು ಪ್ರಮುಖ ಸ್ಪರ್ಧಿಗಳಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಮತ್ತು ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ಅವರು ಚುರುಕಾಗಿದ್ದಾರೆ.