Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಕಾಂಗ್ರೆಸ್ ಸರ್ಕಾರದಲ್ಲಿ ಅಸಮಾಧಾನ ಸ್ಫೋಟ : ಜುಲೈ 27ಕ್ಕೆ ಸಿಎಲ್‌ಪಿ ಸಭೆ

0

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಕೆಲವೇ ತಿಂಗಳುಗಳು ಕಳೆದಿದ್ದು, ಈ ನಡುವಲ್ಲೇ ಪಕ್ಷದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಕಾಂಗ್ರೆಸ್ ಪಕ್ಷದ ಸಚಿವರು ಹಾಗೂ​ ಶಾಸಕರ ನಡುವೆ ಮುಸುಕಿನ ಗುದ್ದಾಟ ಶುರುವಾಗಿದೆ. ಹೌದು ವರ್ಗಾವಣೆ ವಿಚಾರದಲ್ಲಿ ಮಾಡಿದ ಶಿಫಾರಸುಗಳಿಗೆ ಸಚಿವರು ಸ್ಪಂದಿಸುತ್ತಿಲ್ಲವೆಂದು ಅಸಮಾಧಾನಗೊಂಡಿರುವ ಕೆಲವು ಕಾಂಗ್ರೆಸ್‌ ಶಾಸಕರು, ಇದೇ 27ರಂದು ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ (ಸಿಎಲ್‌ಪಿ) ಈ ವಿಷಯ ಪ್ರಸ್ತಾಪಿಸಲು ಮುಂದಾಗಿದ್ದಾರೆ. ಹೋಟೆಲ್‌ ರ‍್ಯಾಡಿಸನ್‌ ಬ್ಲೂ ಹೋಟೆಲ್‌ನಲ್ಲಿ ಅಂದು ಸಂಜೆ 6.30ಕ್ಕೆ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡಾ ಭಾಗವಹಿಸಲಿದ್ದಾರೆ. ತಮ್ಮ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಅಧಿಕಾರಿ, ನೌಕರರ ವರ್ಗಾವಣೆಗೆ ಮಾಡಿದ ಶಿಫಾರಸುಗಳಿಗೆ ಬೆಲೆ ನೀಡುತ್ತಿಲ್ಲ. ಈ ವಿಚಾರವನ್ನು ಸಭೆಯಲ್ಲಿ ಪ್ರಸ್ತಾಪಿಸಲು ಕೆಲವರು ನಿರ್ಧರಿಸಿದ್ದಾರೆ ಎಂದು ಶಾಸಕರೊಬ್ಬರು ಹೇಳಿದರು. ಈ ಗ್ಯಾರಂಟಿಗಳ ಜಾರಿಯ ಕಾರಣಕ್ಕೆ ಈ ಬಾರಿ ಶಾಸಕರ ವಿಶೇಷ ಅನುದಾನಕ್ಕೆ ಕತ್ತರಿ ಬೀಳುವ ಸಾಧ್ಯತೆಯಿದೆ. ಇದು ಕೂಡಾ ಕೆಲವು ಶಾಸಕರ ಕೋಪಕ್ಕೆ ಕಾರಣವಾಗಿದೆ. ವಿಶೇಷ ಅನುದಾನ ನೀಡದೇ ಇದ್ದರೆ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವುದಾದರೂ ಹೇಗೆ ಎಂದು ಪ್ರಶ್ನಿಸಲು ಕೆಲವರು ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ. 2024ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಆರಂಭಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆಯಿದೆ.

Leave A Reply

Your email address will not be published.