ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಕೆಲವೇ ತಿಂಗಳುಗಳು ಕಳೆದಿದ್ದು, ಈ ನಡುವಲ್ಲೇ ಪಕ್ಷದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಕಾಂಗ್ರೆಸ್ ಪಕ್ಷದ ಸಚಿವರು ಹಾಗೂ ಶಾಸಕರ ನಡುವೆ ಮುಸುಕಿನ ಗುದ್ದಾಟ ಶುರುವಾಗಿದೆ. ಸಚಿವರು ದುರ್ನಡತೆ ತೋರುತ್ತಿದ್ದು, ಬುದ್ಧಿ ಹೇಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕರು ದೂರು ನೀಡಿದ್ದಾರೆ. ಅಲ್ಲದೆ, ಕೂಡಲೇ ಶಾಸಕಾಂಗ ಸಭೆ ಕರೆಯುವಂತೆಯೂ ಆಗ್ರಹಿಸಿದ್ದಾರೆ. ವರ್ಗಾವಣೆ ವಿಚಾರದಲ್ಲಿ ಮಾಡಿದ ಶಿಫಾರಸುಗಳಿಗೆ ಸಚಿವರು ಸ್ಪಂದಿಸುತ್ತಿಲ್ಲವೆಂದು ಅಸಮಾಧಾನಗೊಂಡಿರುವ ಕೆಲವು ಕಾಂಗ್ರೆಸ್ ಶಾಸಕರು, ಇದೇ 27ರಂದು ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ (ಸಿಎಲ್ಪಿ) ಈ ವಿಷಯ ಪ್ರಸ್ತಾಪಿಸಲು ಮುಂದಾಗಿದ್ದಾರೆ. ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ನಲ್ಲಿ ಜುಲೈ 27ರಂದು ಸಂಜೆ 6.30ಕ್ಕೆ ಶಾಸಕಾಂಗ ಪಕ್ಷದ ನಾಯಕ, ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ಸಭಾನಾಯಕ ಎನ್.ಎಸ್. ಬೋಸರಾಜು, ಕೆಪಿಸಿಸಿ ಕಾರ್ಯಾಧ್ಯಕ್ಷರು ಭಾಗವಹಿಸಲಿದ್ದಾರೆಂದು ತಿಳಿದುಬಂದಿದೆ.
[vc_row][vc_column]
BREAKING NEWS
- ಚಿಕ್ಕ ರೇವಣಸಿದ್ಧ ಶಿವಶರಣರು ಲಿಂಗೈಕ್ಯ.!
- ಸೆ. 29 ಮತ್ತು 30ರಂದು ಮುಂಬೈ ಲೋಕಮಾನ್ಯ ತಿಲಕ್-ಮಂಗಳೂರು ಜಂಕ್ಷನ್ ರೈಲಿಗೆ ಹೆಚ್ಚುವರಿ ಕೋಚ್ – ರೈಲ್ವೆ ಇಲಾಖೆಯಿಂದ ಅಧಿಕೃತ ಪ್ರಕಟಣೆ
- ಪ್ರಧಾನಿ ಮೋದಿ ಅವರ ಆಸ್ತಿ, ಸಾಲ ಎಷ್ಟಿದೆ ಗೊತ್ತೇ ? – ಕಳೆದ ಬಾರಿಗಿಂತ 15.69 ಶೇಕಡಾ ಆಸ್ತಿ ಏರಿಕೆ..!!
- ‘ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸುವ ಪಣ ತೊಡಿ’-ನೂತನ ಡಿವೈಎಸ್ ಪಿಗಳಿಗೆ ಸಿಎಂ ಕರೆ
- ಕರಿಬೆಕ್ಕು ಅಂತ ಕರಿ ಚಿರತೆ ಸಾಕಿದ ರಷ್ಯಾದ ಯುವತಿ
- ಪಿಎಫ್ ಐ ಕಾರ್ಯಕರ್ತರಿಂದ ಯೋಧನ ಕಿಡ್ನಾಫ್ ಮಾಡಿ ಹಲ್ಲೆ ಪ್ರಕರಣಕ್ಕೆ ಟ್ವೀಟ್ಸ್ : ತನಿಖೆಯಲ್ಲಿ ಸತ್ಯ ಬಯಲು
- ‘ಧಾರ್ಮಿಕ ಗ್ರಂಥಗಳಿಗೆ ಹಕ್ಕುಸ್ವಾಮ್ಯ ಇಲ್ಲ’- ಹೈಕೋರ್ಟ್
- ‘ಈಗ ಕರ್ನಾಟಕದಲ್ಲಿ ಪೊಲೀಸ್ ಸರ್ಕಾರ ಇದೆ’ – ಬೊಮ್ಮಾಯಿ ವಾಗ್ದಾಳಿ
- ಸಂಪೂರ್ಣ ಬದಲಾದ ಜಿಂಕೆ ಮರಿ ರೇಖಾ – ನಟಿ ಈಗಿನ ಸ್ಥಿತಿ ನೋಡಿ ಶಾಕ್ ಆದ ಅಭಿಮಾನಿಗಳು
- ಹೆಣ್ಣು ಮಗುವಿನ ತಾಯಿಯಾದ ನಟಿ ಸ್ವರಾ ಭಾಸ್ಕರ್