ಹೊಸಪೇಟೆ: 2023-24ನೇ ಸಾಲಿನ ಅಲ್ಪಸಂಖ್ಯಾತರ ಸಮುದಾಯದ ಕಾನೂನು ಪದವಿಧರರ ವೃತ್ತಿ ತರಬೇತಿ ಶಿಷ್ಯವೇತನಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಕಲ್ಯಾಣಾಧಿಕಾರಿ ಗುಂಡಪ್ಪ ಜಾಗಲಿಗೊಪ್ಪ ಅವರು ತಿಳಿಸಿದ್ದಾರೆ.
ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ ಮತ್ತು ಪಾರ್ಸಿ ಸಮುದಾಯದ ಕಾನೂನು ಪದವಿಧರರ ವೃತ್ತಿ ತರಬೇತಿ ಶಿಷ್ಯವೇತನ ಪಡೆಯಲು ಅರ್ಜಿ ಭರ್ತಿ ಮಾಡಿ ಅ.16ರೊಳಗೆ ಹೊಸಪೇಟೆ ನಗರದ ಕಾಲೇಜು ರಸ್ತೆಯ ಪರ್ವೇಜ್ ಪ್ಲಾಜಾ ಬಿಲ್ಡಿಂಗ್‌ನ 1ನೇ ಮಹಡಿಯಲ್ಲಿರುವ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಸಲ್ಲಿಸಬೇಕು.
ಅಭ್ಯರ್ಥಿಗಳು ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ಸಮುದಾಯಕ್ಕೆ ಸೇರಿದವರಾಗಿರಬೇಕು, ಕುಟುಂಬದ ವಾರ್ಷಿಕ ಆದಾಯ 3.50 ಲಕ್ಷ ರೂ. ಮೀರಬಾರದು, ಅಭ್ಯರ್ಥಿಗಳ ಬಾರ್ ಕೌನ್ಸಿಲ್‌ನಲ್ಲಿ ಹೆಸರು ನೊಂದಾಯಿಸಿರಬೇಕು, ಕಾನೂನು ಪದವಿ ಪರೀಕ್ಷೆಯನ್ನು ಪಾಸು ಮಾಡಿದ ಮತೀಯ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಅಭ್ಯರ್ಥಿಯಾಗಿರಬೇಕು ಹಾಗೂ ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ 2 ವರ್ಷಗಳ ಅವಧಿಯೊಳಗೆ ಕಾನೂನು ಪದವಿ ಪರೀಕ್ಷೆಯನ್ನು ಪಾಸು ಮಾಡಿರುವ ಅಭ್ಯರ್ಥಿಗಳು ಮಾತ್ರ ತರಬೇತಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ, ಅಭ್ಯರ್ಥಿಯ ವಯಸ್ಸು 30 ವರ್ಷಗಳೊಳಗೆ ಇರಬೇಕು ಎಂದು ಅವರು ತಿಳಿಸಿದ್ದಾರೆ.