ಮಂಗಳೂರು: ಮಂಗಳೂರಿನ ಮೂವರು ಬಜರಂಗದಳ ಕಾರ್ಯಕರ್ತರಿಗೆ ಗಡೀಪಾರು ನೋಟೀಸ್ ವಿಚಾರಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್ ಪ್ರತಿಕ್ರಿಯೆ ನೀಡಿದ್ದಾರೆ. ಬಜರಂಗದಳ ಕಾರ್ಯಕರ್ತರ ಮೇಲೆ ಅನೇಕ ಪ್ರಕರಣಗಳಿವೆ. ಕಾನೂನು ಬಾಹಿರ ಚಟುವಟಿಕೆ ಮಾಡುತ್ತಿದ್ದಾರೆ ಎಂಬ ಕಾರಣಕ್ಕೆ ನೋಟಿಸ್ ನೀಡಲಾಗಿದೆ. ಇದರಲ್ಲಿ ಜಾತಿ, ಧರ್ಮ ನೋಡುವ ಪ್ರಶ್ನೆಯೇ ಇಲ್ಲ. ಇಂತಹ ವ್ಯಕ್ತಿಗಳ ವಿರುದ್ಧ ಬಿಜೆಪಿ ಬಿಜೆಪಿಯವರು ವಕಾಲತ್ತು ವಹಿಸುತ್ತಾರೆ ಎಂದರೆ ಅದಕ್ಕಿಂತ ಕೆಟ್ಟ ಸಂಗತಿ ಇನ್ನೊಂದಿಲ್ಲ ಎಂದರು. ನಮ್ಮ ಪೊಲೀಸರಿಗೆ ತಪ್ಪು ಮಾಡಿದವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಸೂಚಿಸಿದ್ದೇವೆ. ಇದಕ್ಕೆ ರಾಜಕೀಯ ಬಣ್ಣ ಹಚ್ಚುವ ಅಗತ್ಯವಿಲ್ಲ. ಇದೇ ರೀತಿಯ ಅಪರಾಧ ಹಿನ್ನಲೆಯ 65 ಜನರನ್ನು ಈಗಾಗಲೇ ದ.ಕ ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ. ಪೊಲೀಸ್ ಇಲಾಖೆಯಲ್ಲಿ ನಾವು ಹಸ್ತಕ್ಷೇಪ ಮಾಡುತ್ತಿಲ್ಲ. ಪೊಲೀಸರು ನಿಷ್ಪಕ್ಷಪಾತವಾಗಿ ಡ್ರಗ್ ಮಾಫಿಯಾ, ನೈತಿಕ ಪೊಲೀಸ್ ಗಿರಿ ವಿರುದ್ದ ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ಜಿಲ್ಲೆಯ ಬಿಜೆಪಿ ಶಾಸಕರು ಮತ್ತು ನಾಯಕರು ಶಾಂತಿಯ ವಾತಾವರಣ ಹಾಳು ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
[vc_row][vc_column]
BREAKING NEWS
- ವೀರಶೈವ ಲಿಂಗಾಯತರು ಸ್ವಯಂ ಉದ್ಯೋಗ, ಶೈಕ್ಷಣಿಕ, ಕಾರು ಖರೀದಿ ಸಾಲಕ್ಕೆ ಅರ್ಜಿ ಆಹ್ವಾನ.!
- ಕರ್ನಾಟಕ ಡಿ.ಎಸ್.ಟಿ. ಪಿ.ಹೆಚ್.ಡಿ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ
- ಉದ್ಯಮಶೀಲತಾ ಅಭಿವೃದ್ದಿ ತರಬೇತಿ ಕಾರ್ಯಕ್ರಮ.!
- ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿಗೆ ರಾಷ್ಟ್ರಮಟ್ಟದಲ್ಲಿ 2ನೇ ಬಹುಮಾನ- ಡಿ. ಸುಧಾಕರ್
- ಮಾರಕ ಕಾಯಿಲೆ ಡೆಂಗ್ಯೂ ಬಗ್ಗೆ ಈ ಲಕ್ಷಣಗಳು ಕಂಡುಬಂದರೆ.?
- ಈ ಕಾರಣಕ್ಕೆ ಈ ಪರ್ವತ ಚಾರಣಕ್ಕೆ ನಿಷೇಧ.. !
- ಇಂದು ಮತ್ತೊಮ್ಮೆ ಎಮರ್ಜೆನ್ಸಿ ಅಲರ್ಟ್.. ! ಏನದು.?
- ಪುಷ್ಪಗಳಿಂದ ಶತ್ರುನಾಶ ತಂತ್ರ ಈ ಒಂದೇ ಒಂದು ಪುಷ್ಪದಿಂದ ಎಂತಹ ಶತ್ರು ಇದ್ದರೂ ಕೂಡ ನಾಶ ಮಾಡಿ ನಿಮ್ಮಂತೆ ಶರಣಾಗತಿಯಾಗುವತರ ಮಾಡಬಹುದು!
- — –ದಾಸೋಹದ ಸಂಗಣ್ಣ ಅವರ ವಚನ .!
- ನೇಪಾಳದಲ್ಲಿ ಭೂಕಂಪನ: ದೆಹಲಿ, ಎನ್ ಸಿಆರ್ ನಲ್ಲೂ ಕಂಪಿಸಿದ ಭೂಮಿ