Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

ಕಾರವಾರ : ವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡು ಬ್ಲ್ಯಾಕ್ ಮೇಲ್ -ಪುತ್ತೂರಿನ ಯುವಕ ಅರೆಸ್ಟ್..!

0

ಬಣ್ಣದ ಮಾತುಗಳಿಂದ ವಿಶ್ವಾಸ ಗಳಿಸಿ ವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡು ಬಳಿಕ ಬ್ಯಾಕಲ್ ಮೇಲ್ ಮಾಡಿ ಹಣ ಕೀಳಲು ಯತ್ನಿಸಿದ್ದ  ದಕ್ಷಿಣ ಕನ್ನಡ ಜಿಲ್ಲೆಯ  ಪುತ್ತೂರಿನ ವ್ಯಕ್ತಿಯನ್ನು ಕಾರವಾರ ಪೊಲೀಸರು ಬಂಧಿಸಿದ್ದಾರೆ. 

ಕಾರವಾರ : ಬಣ್ಣದ ಮಾತುಗಳಿಂದ ವಿಶ್ವಾಸ ಗಳಿಸಿ ವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡು ಬಳಿಕ ಬ್ಯಾಕ್‌ ಮೇಲ್ ಮಾಡಿ ಹಣ ಕೀಳಲು ಯತ್ನಿಸಿದ್ದ  ದಕ್ಷಿಣ ಕನ್ನಡ ಜಿಲ್ಲೆಯ  ಪುತ್ತೂರಿನ ವ್ಯಕ್ತಿಯನ್ನು ಕಾರವಾರ ಪೊಲೀಸರು ಬಂಧಿಸಿದ್ದಾರೆ.

ಪುತ್ತೂರಿನ ಆರ್ಲಪದವು ಮೂಲದ ಪ್ರಶಾಂತ ಭಟ್ ಮಾಣಿಲ ಬಂಧಿತ ಆರೋಪಿಯಾಗಿದ್ದಾನೆ.

ದೂರು ನೀಡಿದ ಮಹಿಳೆಯು ಸಂಗೀತದಲ್ಲಿ ಆಸಕ್ತಿ ಇದ್ದು ಕ್ಲಬ್ ಹೌಸ್ ಆ್ಯಪ್‌ನಲ್ಲಿ ಹಾಡುತ್ತಿದ್ದಳು.

2020 ರಲ್ಲಿ ಆ್ಯಪ್ ಮೂಲಕವೇ ಆರೋಪಿಯ ಪರಿಚಯವಾಗಿದೆ. ಪರಿಚಯ ಸ್ನೇಹಕ್ಕೆ ತಿರುಗಿ ಕ್ರಮೇಣ ಪರಸ್ಪರ ಇಷ್ಟಪಟ್ಟಿದ್ದಾರೆ.

2023ರ ಜನವರಿ ತಿಂಗಳಲ್ಲಿ ಆರೋಪಿಯು ಮಹಿಳೆಯನ್ನು ಭೇಟಿಯಾಗಲು ಬಂದು ಖಾಸಗಿ ಲಾಡ್ಜ್ ಒಂದರಲ್ಲಿ ರೂಂ ಮಾಡಿದ್ದಾನೆ.

ಅಲ್ಲಿ ಮಹಿಳೆಯ ಮೇಲೆ ಆರೋಪಿಯು ಲೈಂಗಿಕ ಹಲ್ಲೆ ನಡೆಸಿದ್ದಾನೆ. ಅಲ್ಲದೇ ಅದೇ ಲಾಡ್ಜಿನಲ್ಲಿ ಘಟನೆಯು ಮತ್ತೊಮ್ಮೆ ನಡೆದಿದೆ ಎಂದು ಮಹಿಳೆಯು ದೂರಿನಲ್ಲಿ ದಾಖಲಿಸಿದ್ದಾರೆ.

ಈ ವೇಳೆ ಆರೋಪಿಯು ಮಹಿಳೆಯೊಂದಿಗಿರುವ ಖಾಸಗಿ ಕ್ಷಣಗಳ ಫೋಟೋ ಕ್ಲಿಕ್ಕಿಸಿಕೊಂಡಿದ್ದಾನೆ. ಜತೆಗೆ ವಿಡಿಯೋ ಕಾಲ್ ಮಾಡಿ ಅಲ್ಲಯೂ ನಗ್ನ ದೃಶ್ಯಗಳನ್ನು ಸೆರೆ ಹಿಡಿದಿದ್ದಾನೆ ಎಂದು ದೂರಲಾಗಿದೆ.

ಆರೋಪಿಯು ಮಹಿಳೆಯಿಂದ ಹಣಕ್ಕೂ ಬೇಡಿಕೆ ಇಟ್ಟಿದ್ದು, ಮಹಿಳೆಯು ಒಮ್ಮೆ 25 ಸಾವಿರ ಹಣ ನೀಡಿದ್ದಾಳೆ.

ಬಳಿಕ ಆರೋಪಿಯು ಖಾಸಗಿ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿ ಬೆದರಿಕೆ ನೀಡಿ ಏಳು ಲಕ್ಷ ರೂ. ಗಳಿಗೆ ಬೇಡಿಕೆ ಇಟ್ಟಿದ್ದಾನೆ.

ಅಲ್ಲದೇ ಮಹಿಳೆಯ ತಾಯಿ ಹಾಗು ಸ್ನೇಹಿತರಿಗೂ ಖಾಸಗಿ ಕ್ಷಣಗಳ ಚಿತ್ರಗಳನ್ನು ಕಳುಹಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಕಾರವಾರದ ಮಹಿಳಾ ಠಾಣೆಯಲ್ಲಿ  ಈ ಬಗ್ಗೆ ಪ್ರಕರಣ ದಾಖಲಾಗಿದ್ದು ಆರೋಪಿ ಪ್ರಶಾಂತ ಭಟ್ ಮಾಣಿಲನನ್ನು ಪೊಲೀಸರು ಬಂಧಿಸಿದ್ದಾರೆ.

Leave A Reply

Your email address will not be published.