ಕಾರ್ಮಿಕರಿಗೆ ಕೇಂದ್ರ ಸರ್ಕಾರವು ಭರ್ಜರಿ ಗುಡ್ ನ್ಯೂಸ್ ನೀಡಿದೆ. ಹೌದು, ಕನಿಷ್ಠ ವೇತನ ದರವನ್ನು ಹೆಚ್ಚಳ ಮಾಡಿದೆ. ವೇರಿಯಬಲ್ ಡಿಯರ್ನೆಸ್ ಅಲೋವೆನ್ಸ ಪರಿಷ್ಕರಣೆ ಮೂಲಕ ಕನಿಷ್ಠ ವೇತನ ದರ ಹೆಚ್ಚಳ ಘೋಷಿಸಿದೆ.
ಇದು ಅಕ್ಟೋಬರ್ 1, 2024 ರಿಂದ ಜಾರಿಗೆ ಬರಲಿದೆ. ಕೌಶಲ್ಯಮಟ್ಟಕ್ಕೆ ಅನುಗುಣವಾಗಿ ಕನಿಷ್ಠ ವೇತನ ದರ ಹೆಚ್ಚಿಸಲಾಗಿದೆ.
ಪರಿಷ್ಕೃತ ವೇತನವು ಕಟ್ಟಡ ಕಾರ್ಮಿಕರು, ಲೋಡಿಂಗ್ ಮತ್ತು ಅನ್‌ಲೋಡಿಂಗ್, ವಾಚ್ ಮತ್ತು ವಾರ್ಡ್, ಕಸ ಗುಡಿಸುವುದು, ಸ್ವಚ್ಛತೆ, ಮನೆಗೆಲಸ, ಗಣಿಗಾರಿಕೆ ಮತ್ತು ಕೃಷಿ ಸೇರಿದಂತೆ ವಿವಿಧ ವಲಯಗಳ ಕಾರ್ಮಿಕರಿಗೆ ಪ್ರಯೋಜನವನ್ನು ನೀಡುತ್ತದೆ.